ಶಿವಾಜಿ ಆದರ್ಶ ಗುಣ ಮೈಗೂಡಿಸಿಕೊಳ್ಳುವುದು ಅಗತ್ಯ
ತುಮಕೂರು: ಶಿವಾಜಿ ಮಹಾರಾಜರ ಆದರ್ಶ ಗುಣಗಳನ್ನು ಇಂದಿನ ಮಕ್ಕಳಲ್ಲಿ ಬೆಳೆಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ತಿಳಿಸಿದರು.
ಅವರು ನಗರದ ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಮಹಾನಗರಪಾಲಿಕೆ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಸಂಯುಕ್ತವಾಗಿ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ 387 ನೇ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಹಿಂದೂ ಧರ್ಮ ಸಂಸ್ಕೃತಿಯ ಪ್ರತೀಕವಾಗಿದ್ದ ಶಿವಾಜಿ ಮಹಾರಾಜ್ ಹುಟ್ಟುತ್ತಲೇ ಮಹಾರಾಜರಾಗಿರಲಿಲ್ಲ.
ಆದರೆ ಅವರು ನಂತರದಲ್ಲಿ ಚಾಣಾಕ್ಷತನದಿಂದ ಧೀಮಂತ ನಾಯಕತ್ವದಿಂದ ಪಡೆದುಕೊಂಡರು. ನಂತರ ಇಡೀ ಸಾಮ್ರಾಜ್ಯವನ್ನು ಸಮರ್ಥವಾಗಿ ಆಳ್ವಿಕೆ ನಡೆಸಿ ಹಿಂದೂ ಧರ್ಮ ಸಂಸ್ಕೃತಿ ಬೆಳವಣಿಗೆಗೆ ಕಾರಣರಾದರು ಎಂದರು.
ವೈರಿಗಳನ್ನು ಗೌರವಿಸುವ ಗುಣ ಬೆಳೆಸಿಕೊಂಡಿದ್ದ ಅವರು ಯುದ್ಧದಲ್ಲಿ ಸೋತವರನ್ನು ಆದರದಿಂದ ಕಾಣುತ್ತಿದ್ದರು. ಸುಭಾಷ್ ಚಂದ್ರಬೋಸರಿಗೆ ಶಿವಾಜಿ ಮಹಾರಾಜರು ರೋಲ್ ಮಾಡೆಲ್ ಆಗಿದ್ದರು. ಇಂತಹ ಆದರ್ಶ ವ್ಯಕ್ತಿತ್ವದ ಶಿವಾಜಿ ಮಹಾರಾಜರ ಭಾವಚಿತ್ರ ಪ್ರತಿಮನೆಯಲ್ಲೂ ಇರಬೇಕು, ಅವರನ್ನು ನೋಡಿ ಮಕ್ಕಳು ನಾನು ಶಿವಾಜಿ ರೀತಿಯಲ್ಲಿ ಅಪ್ಪಟ ದೇಶಭಕ್ತನಾಗಬೇಕೆನ್ನುವ ಗುಣ ಬೆಳೆಸಿಕೊಳ್ಳಬೇಕು, ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಜ್ಞಾನ ಬೆಳೆಸಬೇಕೆಂದು ಸಲಹೆ ನೀಡಿದರು.
ವಿಶೇಷ ಉಪನ್ಯಾಸ ನೀಡಿದ ವಿದ್ಯಾವಾಚಸ್ಪತಿ ಕವಿತಾಕೃಷ್ಣ ಅಖಂಡ ಭಾರತೀಯರ ಮನಸ್ಸು ಒಂದಾಗಬೇಕೆಂದರೆ, ಶಿವಾಜಿ ಮಹಾರಾಜರ ಆದರ್ಶನೀಯ ಗುಣಗಳು ಅಳವಡಿಕೆ ಮುಖ್ಯ. ಹಿಂದೂ ಧರ್ಮದ ಸಂರಕ್ಷಕರಾಗಿ ಕೆಲಸ ಮಾಡಿದ್ದಾರೆ. ಶಿವಾಜಿ ಮಹಾರಾಜರ ಹೆಸರು ಪ್ರಮುಖ ರಸ್ತೆಗಳಲ್ಲಿ ಸರ್ಕಲ್ಗಳಲ್ಲಿ ಇಡುವುದು ಅಗತ್ಯವಾಗಿದೆ. ರಾಜ್ಯ ಸರ್ಕಾರ ಶಿವಾಜಿ ಮಹಾರಾಜರ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸುತ್ತಿರುವುದು ಶ್ಲಾಘನೀಯ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

