ತುಮಕೂರು

'ಕೈ' ದುರಾಡಳಿತದಿಂದ ದಲಿತರ ಪ್ರಗತಿ ಕುಂಠಿತ

Published On :

ಕ.ಪ್ರ.ವಾರ್ತೆ   ತುಮಕೂರು   ಫೆ.21
ಕಳೆದ 65 ವರ್ಷಗಳಿಂದ ದಲಿತರು ಮತ್ತು ಹಿಂದುಳಿದವರನ್ನು ಕಾಂಗ್ರೆಸ್ ರಾಜಕೀಯ ಗುಲಾಮರನ್ನಾಗಿ ಮಾಡಿಕೊಂಡಿದೆ ಎಂದು ಮಾಜಿ ಸಚಿವ ಎ.ನಾರಾಯಣಸ್ವಾಮಿ ವಾಗ್ದಾಳಿ ಮಾಡಿದರು.
ಅವರು ತುಮಕೂರಿನಲ್ಲಿ ಫೆ. 23 ರಂದು ನಡೆಯಲಿರುವ ಹಿಂದುಳಿದ, ದಲಿತ ವರ್ಗದ ಸ್ವಾಭಿಮಾನಿ ಸಮಾವೇಶದ ಸಿದ್ಧತೆ ಪರಿಶೀಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹಿಂದುಳಿದವರು, ದಲಿತರನ್ನು ಯಾವತ್ತೂ ಕಾಂಗ್ರೆಸ್ ಸ್ವಾವಲಂಬಿಯಾಗಿ ಬೆಳೆಯಲು ಅವಕಾಶವನ್ನೇ ಕಲ್ಪಿಸಲಿಲ್ಲ. ಕೇವಲ ಯೂನಿಫಾರಂಗೆ ಹಣ ಕೊಟ್ಟಿದೆ ಎಂದು ವ್ಯಂಗ್ಯವಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲಾ ರಂಗದಲ್ಲೂ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಅವರು ಕರೆ ನೀಡಿದರು. ದೇಶದಲೆಲ್ಲಾ ಮೋದಿ ಪರ ಅಲೆ ಎದ್ದಿದೆ. ಈಶಾನ್ಯ ರಾಜ್ಯಗಳಲ್ಲೂ ಸಹ ಬಿಜೆಪಿ ಜಯಭೇರಿ ಬಾರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ತಾವು ಮುಂಬರುವ ಲೋಕಸಭಾ ಚುನಾವಣೆ ಟಿಕೆಟ್ ಆಕಾಂಕ್ಷಿಯಲ್ಲ. ಒಂದು ವೇಳೆ ಪಕ್ಷ ಬಯಸಿದರೆ ಸ್ಪರ್ಧಿಸುವುದಾಗಿ ತಿಳಿಸಿದರು. ಬಿಜೆಪಿ ಯಾವತ್ತೂ ಶೋಷಿತರ, ಹಿಂದುಳಿದ ವರ್ಗಗಳ ಪರ ಇಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಚುನಾವಣೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೇವರಾಜ ಅರಸು, ಬಂಗಾರಪ್ಪ ಅವರಿಗೆ ಕಾಂಗ್ರೆಸ್‌ನಲ್ಲಿ ಬಂದ ಗತಿಯೇ ಬರಲಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಅಲ್ಪಸಂಖ್ಯಾತರ ಸಮಾವೇಶವನ್ನು ಮಾಡಲಾಗುವುದು ಎಂದು ತಿಳಿಸಿದರು.
23 ರಂದು ಸ್ವಾಭಿಮಾನಿ ಸಮಾವೇಶ ನಡೆಯಲಿದ್ದು ಬಿಜೆಪಿ ಯಾವತ್ತೂ ಹಿಂದುಳಿದ ವರ್ಗ ಮತ್ತು ದಲಿತರ ಪರ ಎಂಬ ಸಂದೇಶ ರವಾನಿಸಲಾಗುವುದು ಎಂದು ತಿಳಿಸಿದರು.
ಮುಖ್ಯ ಭಾಷಣಕಾರರಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜಸಿಂಗ್ ಚೌಹಾಣ್ ಆಗಮಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ  ಪ್ರಹ್ಲಾದ್ ಜೋಷಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್‌ಶೆಟ್ಟರ್, ಸದಾನಂದಗೌಡ,
ಸಂಸದ ಅನಂತಕುಮಾರ್, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ, ಅರವಿಂದ ಲಿಂಬಾವಳಿ, ಗೋವಿಂದ ಕಾರಜೋಳ, ಕೋಟಾ ಶ್ರೀನಿವಾಸ ಪೂಜಾರಿ, ಎ. ನಾರಾಯಣಸ್ವಾಮಿ ಮುಂತಾದವರು ಆಗಮಿಸಲಿದ್ದಾರೆ .



ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲಾ ರಂಗದಲ್ಲೂ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಅವರು ಕರೆ ನೀಡಿದರು. ದೇಶದಲೆಲ್ಲಾ ಮೋದಿ ಪರ ಅಲೆ ಎದ್ದಿದೆ. ಈಶಾನ್ಯ ರಾಜ್ಯಗಳಲ್ಲೂ ಸಹ ಬಿಜೆಪಿ ಜಯಭೇರಿ ಬಾರಿಸಲಿದೆ
ಟಿ  ಎ.ನಾರಾಯಣಸ್ವಾಮಿ, ಮಾಜಿ ಸಚಿವ



ನಮ್ಮ ಅಭ್ಯರ್ಥಿಗಳು ಸೊಗಡು, ನಂದೀಶ್...
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ಎಂ.ಬಿ. ನಂದೀಶ್ ಅವರನ್ನು ಸೂಚಿಸಲಾಗಿದೆ. ಈ ಇಬ್ಬರು ಅಭ್ಯರ್ಥಿಗಳಲ್ಲಿ ಯಾರಿಗಾದರೂ ಟಿಕೆಟ್ ಕೊಡಲಿ ಎಂದ ಅವರು ಕಾಂಗ್ರೆಸ್ ಬಾಗಿಲು ತಟ್ಟಿದವರು, ಯಡಿಯೂರಪ್ಪ ವಿರುದ್ಧವೇ ಸ್ಪರ್ಧಿಸುತ್ತೇನೆ ಎಂದವರಿಗೆ ಹೇಗೆ ಟಿಕೆಟ್ ನೀಡುತ್ತಾರೆ ಎಂದು ಪರೋಕ್ಷವಾಗಿ ಜಿ.ಎಸ್. ಬಸವರಾಜ ವಿರುದ್ಧ ವಾಗ್ದಾಳಿ ನಡೆಸಿದರು. ಮಾಜಿ ಸಚಿವ  ಸೊಗಡು ಶಿವಣ್ಣ, ಎಂ.ಬಿ. ನಂದೀಶ್, ಕೆ.ಪಿ. ಮಹೇಶ್ ಮುಂತಾದವರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.