ದೇಗುಲ ಬಾಗಿಲು ಮುರಿದು ಕಳವು
ಕುಣಿಗಲ್: ತಾಲೂಕಿನ ಕಸಬಾ ಹೋಬಳಿಯ ತೆಪ್ಪಸಂದ್ರ ಗ್ರಾಮದ ಹೊರವಲಯದಲ್ಲಿನ ಬೆಟ್ಟದ ನರಸಿಂಹಸ್ವಾಮಿ ದೇವಾಲಯ ಬಾಗಿಲು ಮುರಿದು ಹುಂಡಿಯಲ್ಲಿದ್ದ ಹಣ ಮತ್ತು ಬೆಳ್ಳಿ ಸಾಮಗ್ರಿ ಕಳವು ಮಾಡಿರುವ ಘಟನೆ ನಡೆದಿದೆ. ದೇವಾಲಯ ಅರ್ಚಕ ಶ್ರೀನಿವಾಸ್, ಶುಕ್ರವಾರ ಮಧ್ಯಾಹ್ನ ಪೂಜೆಗೆ ಆಗಮಿಸಿದಾಗ, ದೇವಾಲಯದಲ್ಲಿ ಕಳ್ಳತನವಾಗಿರುವುದು ಪತ್ತೆಯಾಗಿದ್ದು, ಗ್ರಾಮಸ್ಥರಿಗೆ ತಿಳಿಸಿದ ಮೇರೆಗೆ, ಗ್ರಾಮಸ್ಥರು ಪರಿಶೀಲಿಸಿದಾಗ ಹುಂಡಿಯಲ್ಲಿದ್ದ ಹಣ,ದೇವರ ಬೆಳ್ಳಿನಾಮ, ಕಿರೀಟ ಸೇರಿದಂತೆ ಇತರೆ ಪೂಜಾ ಸಾಮಾಗ್ರಿಗಳು ಕಳುವಾಗಿರುವುದರ ಬಗ್ಗೆ ಕುಣಿಗಲ್ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಕ್ರಮ ಮರಳುಗಾರಿಕೆ ತಡೆಗೆ ಆಗ್ರಹ
ಕುಣಿಗಲ್: ತಾಲೂಕಿನ ಮಾರ್ಕೋನಹಳ್ಳಿ ಜಲಾಶಯ ಹಿನ್ನಿರಿನ ಅಕ್ಕಪಕ್ಕದ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಜಲಾಶಯದ ಕೆಲ ಭಾಗ ನೆರೆಯ ನಾಗಮಂಗಲ ತಾಲೂಕಿನ ವ್ಯಾಪ್ತಿಗೂ ಬರುವ ಪ್ರದೇಶದಲ್ಲಿ ಮರಳು ಮಾಫಿಯದವರು ಜಲಾಶಯ ಹಿನ್ನಿರಿನ ಪ್ರದೇಶದಲ್ಲೇ ಜೆಸಿಬಿ ಯಂತ್ರಗಳನ್ನು ಬಳಸಿ, ಮರಳು ಎತ್ತುವಳಿ ಮಾಡಿ, ರಾತ್ರಿ ವೇಳೆ ತಾಲೂಕಿನ ಮೂಲಕ ಬೆಂಗಳೂರು ಇತರೆಡೆ ಸಾಗಾಟ ನಡೆಸುತ್ತಿದ್ದಾರೆ. ಹೇಮಾವತಿ ನಾಲಾ ವಲಯದ ಅಧಿಕಾರಿಗಳು ಜಲಾಶಯದ ಹಿನ್ನೀರಿನ ವ್ಯಾಪ್ತಿ ಸೇರಿದಂತೆ ತಮ್ಮ ದೇ ಆಚ್ಚುಕಟ್ಟು ಪ್ರದೇಶದಲ್ಲಿ ಮರಳು ಎತ್ತುವಳಿ ಮಾಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ಜಾಣಮೌನ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ಎಡೆಯೂರಿನ ಕುಮಾರ್, ಶಿವು, ಆದರ್ಶ ಇತರರು ಆರೋಪಿಸಿದ್ದಾರೆ.
ಅಕ್ಷರ ದಾಸೋಹ ಅಧಿಕಾರಿ ಪರಿಶೀಲನೆ
ಮಾಗಡಿಪಾಳ್ಯ ಸರ್ಕಾರಿ ಪ್ರೌಢಶಾಲೆ ಅವ್ಯವಸ್ಥೆ ಬಗ್ಗೆ ಸುದ್ದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಯ್ಯ, ಕೊಪ್ಪ ಗ್ರಾಪಂ ಅಧ್ಯಕ್ಷರು, ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೃಷ್ಣ, ಶುಕ್ರವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ, ಎಸ್‌ಎಸ್‌ಎಲ್‌ಸಿಯ ಜಿಲ್ಲಾ ಮಟ್ಟದ ಪೂರ್ವಭಾವಿ ಪರೀಕ್ಷೆ ನಡೆಸುವಲ್ಲಿ ವಿಫಲರಾಗಿರುವುದಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಮುಖ್ಯೋಪಾಧ್ಯಯರು ಸೇರಿದಂತೆ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದು, ಮೇಲಾಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಬಿಇಒ ಸಿದ್ದಯ್ಯ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

