ತುಮಕೂರು

ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ

Published On :

ತಿಪಟೂರು: ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘ ತಿಪಟೂರು ಉಪವಿಭಾಗದ ಎಲ್ಲಾ ಗ್ರಾಮೀಣ ಅಂಚೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ಅಂಚೆ ಕಚೇರಿಯಿಂದ ಉಪ ವಿಭಾಗಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆಯೊಂದಿಗೆ ಉಪ ವಿಭಾಗಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಂಘದ ಉಪಾಧ್ಯಕ್ಷ ಬಿ.ರಾಮಣ್ಣ, ಗ್ರಾಮೀಣ ನೌಕರರನ್ನು ಪೌರ ನೌಕರ ಎಂದು ಪರಗಣಿಸಿ ಇಲಾಖೆಯ ನೌಕರರಿಗೆ ಕೊಡುವ ಎಲ್ಲಾ ಸೌಲಭ್ಯ ಕೊಡಬೇಕು. ಕೇಂದ್ರದ 7ನೇ ವೇತನ ಆಯೋಗದ ವ್ಯಾಪ್ತಿಗೆ ಸೇರಿಸಿಕೊಳ್ಳಬೇಕು. ಅನುಕಂಪದ ಆಧಾರದ ನೌಕರಿಯ ಸೌಲಭ್ಯಗಳನ್ನು ಕೊಡಬೇಕು. ಶೇ.25ರಷ್ಟು ಹುದ್ದೆಗಳನ್ನು ಸೇವಾ ಹಿರಿತನದ ಆಧಾರದ ಮೇಲೆ ಬಡ್ತಿ ಕೊಡಬೇಕು. ಜೊತೆಗೆ ಶೇ.50ರಷ್ಟು ಡಿಎ ಮಂಜೂರು ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ಸಂಘದ ತಾಲೂಕು ಅಧ್ಯಕ್ಷ ಸಿ.ಶಿವಲಿಂಗಯ್ಯ, ಇ.ಸಿ. ಸದಸ್ಯ ಮಡಿವಾಳಪ್ಪ, ಸಹ ಕಾರ್ಯದರ್ಶಿ ವಿಜಿಕುಮಾರ್, ತಾಲೂಕು ಕಾರ್ಯದರ್ಶಿ ಜಗದೀಶ್ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.