ಅಂಬರೀಷ್ ಕುರಿತು ಇಲ್ಲಸಲ್ಲದ ವದಂತಿ ಖಂಡನೀಯ
ಕುಣಿಗಲ್: ರೆಬೆಲ್ ಸ್ಟಾರ್ ಅಂಬರೀಶ್ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿದ್ದು ಅವರು ಶೀಘ್ರವಾಗಿ ಗುಣಮುಖರಾಗಿ ಕಾರ್ಯೋನ್ಮುಖರಾಗುತ್ತಾರೆ. ಅವರ ಆರೋಗ್ಯ ವಿಷಯವಾಗಿ ಇಲ್ಲಸಲ್ಲದ ವದಂತಿಗಳು ಹಬ್ಬುತ್ತಿರುವುದು ಖಂಡನೀಯ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಲ್. ಹರೀಶ್ ತಿಳಿಸಿದರು.
ಸೋಮವಾರ ತಾಲೂಕು ಅಂಬರೀಶ್ ಅಭಿಮಾನಿಗಳ ಸಂಘದ ವತಿಯಿಂದ ಅಂಬರೀಶ್ ಆರೋಗ್ಯ ಸುಧಾರಣೆಗೆ ಪಟ್ಟಣದ ಕೊಟೆಯ ತುಡಿಕೆ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, 101 ಈಡುಗಾಯಿ ಸೇವೆಸಲ್ಲಿಸಿ, ನೆಚ್ಚಿನ ನಟನ ಆರೋಗ್ಯ ಸುಧಾರಿಸುವಂತೆ ಅಭಿಮಾನಿಗಳು ಸಂಕಲ್ಪಿಸಿ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಅಂಬರೀಶ್ ಕೇವಲ ರಾಜಕಾರಣಿಯಷ್ಟೆ ಅಲ್ಲ, ಕನ್ನಡಚಿತಂರ್ರಂಗದ ಎಲ್ಲಾ ತರಹದ ನಾಯಕರಾಗಿದ್ದು, ಮಾನವೀಯ ಮೌಲ್ಯಗಳ ಸೆಲೆಯಾಗಿದ್ದಾರೆ. ಅವರು ಶೀಘ್ರವಾಗಿ ಗುಣಮುಖರಾಗಿ ಅವರ ಸೇವೆ ರಾಜ್ಯಕ್ಕೆ ಮತ್ತಷ್ಟು ಕಾಲ ಲಭಿಸಿ, ರಾಜ್ಯ ಹಾಗೂ ಕನ್ನಡ ಚಿತ್ರರಂಗಕ್ಕೆ ಅವರ ಮಾರ್ಗದರ್ಶನ ಅತ್ಯಗತ್ಯವಾಗಿದೆ ಎಂದರು. ಅಂಬರೀಶ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ನಾಗೇಶ್, ತಾಲೂಕು ಅಧ್ಯಕ್ಷ ವೆಂಕಟೇಶ್, ಕನ್ನಡಸೇನೆ ಅಧ್ಯಕ್ಷ ಶ್ರೀನಿವಾಸ್, ಶಿವರಾಜ್ಕುಮಾರ್ ಸಂಘದ ಅಧ್ಯಕ್ಷ ಶಿವಣ್ಣ, ನಾಗರಾಜ್, ಗಿರೀಶ್ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

