ರಾಜ್ಯ ಸರ್ಕಾರಕ್ಕೆ ಅಭಿನಂದನೆ
ಪಾವಗಡ: ದಲಿತ ಮುಖಂಡರಾದ ಪ್ರೊ. ಬಿ.ಕೃಷ್ಣಪ್ಪ ಹಾಗೂ ಮದ್ದುಮಲ್ಲಿ ರಂಗರಾವ್ ಅವರ ಸ್ಮಾರಕ ನಿರ್ಮಾಣಕ್ಕೆ ಬಜೆಟ್ನಲ್ಲಿ 2 ಕೋಟಿ ಮೀಸಲಿಟ್ಟ ಹಿನ್ನೆಲೆಯಲ್ಲಿ ಇಲ್ಲಿನ ದಲಿತ ಸಂಘಟನೆಯ ಪದಾಧಿಕಾರಿಗಳು ರಾಜ್ಯ ಸರ್ಕಾರವನ್ನು ಅಭಿನಂದಿಸಿದ್ದಾರೆ. ದಲಿತ ಮುಖಂಡರಾದ ಕೊಟಾ ಶಂಕರ್ ಹಾಗೂ ದಲಿತ ವಿಮೋಚನೆ ಸೇನೆ ಅಧ್ಯಕ್ಷ ವಿರಪಸಮುದ್ರ ರಾಮಾಂಜಿನಪ್ಪ ಇತರರು ಸರ್ಕಾರವನ್ನು ಶ್ಲಾಘಿಸಿದ್ದಾರೆ.
ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯ ಕ್ರಮ: ರಾಜು
ಗುಬ್ಬಿ: ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಮಾಡಲು ಲಿಟ್ರೆಸಿ ಪ್ರಾಜೆಕ್ಟ್ ಎಂಬ ಮಹತ್ವದ ಯೋಜನೆಯನ್ನು ರೋಟರಿ ಸಂಸ್ಥೆ ಜಾರಿಗೊಳಿಸಿದ್ದು ಈ ಯೋಜನೆಯಡಿ ಶಾಲೆಗಳಿಗೆ ಇ-ಪಾಠಶಾಲೆಯಡಿ ಗುಣಮಟ್ಟದ ಶಿಕ್ಷಣ ನೀಡಲು ಅನುಕೂಲವಾಗುವಂತೆ ಅಗತ್ಯವಾದ ಪಾಠೋಪಕರಣಗಳನ್ನು ವಿತರಿಸಲಾಗುತ್ತಿದೆ ಎಂದು ರೋಟರಿ ಸಂಸ್ಥೆಯ ಜಿಲ್ಲಾ ಅಸಿಸ್ಟೆಂಟ್ ಗೌರ್ನರ್ ಇ.ಟಿ.ಕೇರ್. ರಾಜು ತಿಳಿಸಿದರು.ತಾಲೂಕಿನ ಅಮ್ಮನಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ರೋಟರಿ ಸಂಸ್ಥೆ ಮತ್ತು ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೋಲಾರ್ ಲ್ಯಾಂಪ್, ಕಂಪ್ಯೂಟರ್ ಆಧಾರಿತ ಇ-ಪಾಠಶಾಲಾ ತಂತ್ರಾಂಶ, ಲ್ಯಾಪ್ಟಾಪ್, ಯುಪಿಎಸ್, ಟೆಲಿವಿಷನ್ ಹಾಗೂ ಇಂಗ್ಲಿಷ್ ಕನ್ನಡ ನಿಘಂಟು ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಹಲವಾರು ಸಂಸ್ಥೆಗಳು ನಗರ ಪ್ರದೇಶಗಳ ಶಾಲೆಗಳಿಗೆ ಮಾತ್ರ ಪಾಠೋಪಕರಣಗಳನ್ನು ನೀಡುವ ಪರಿಪಾಠವಿದೆ. ರೋಟರಿ ಸಂಸ್ಥೆ ವಿಶೇಷವಾಗಿ ಗ್ರಾಮೀಣ ಶಾಲೆಗಳಿಗೆ ಪಾಠೋಪಕರಣಗಳನ್ನು ವಿತರಿಸುವಂತಹ ಮಹತ್ವದ ಯೋಜನೆ ಹಾಕಿಕೊಂಡಿದ್ದು ಗ್ರಾಮೀಣ ಮಕ್ಕಳಿಗೆ ಆಧುನಿಕ ಮತ್ತು ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು. ತುಮಕೂರು ರೋಟರಿ ಸೆಂಟ್ರಲ್ನ ಮಾಜಿ ಅಧ್ಯಕ್ಷ ನಾ.ಚಂ. ಗಂಗಾಧರಶಾಸ್ತ್ರಿ ಮಾತನಾಡಿ ರೋಟರಿ ಸಂಸ್ಥೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.
ಕಾರು ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವು
ಕುಣಿಗಲ್: ರಸ್ತೆದಾಟುತ್ತಿದ್ದ ವ್ಯಕ್ತಿಯೊಬ್ಬನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೆ ಮೃಪಟ್ಟಿರುವ ಘಟನ ರಾಹೆ 75ರ ಅಂಚೇಪಾಳ್ಯಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತನನ್ನು ಬೊಮ್ಮೆನಹಳ್ಳಿ ಪಾಳ್ಯದ ಮಹಮದ್ ಜಹೀರ್ ಸಾಬ್ (60)ಎಂದು ಗುರುತಿಸಲಾಗಿದ್ದು, ಗ್ರಾಮಸ್ಖರು ಕುಣಿಗಲ್ ಪೊಲೀಸರಿಗೆ ವಿಷಯ ತಿಳಿಸಿದ ಮೇರೆಗೆ, ವಾಹನ ಮತ್ತು ಚಾಲಕನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

