ತುಮಕೂರು

ಪ್ರತಿಭೆ ಅನಾವರಣಗೊಳಿಸಲು ಸಾಂಸ್ಕೃತಿಕ ಕಾರ್ಯಕ್ರಮ ಪೂರಕ

Published On :

ಗುಬ್ಬಿ:  ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಸಾಂಸ್ಕೃತಿಕ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಗ್ರಾಮಪಂಚಾಯತಿ ಸದಸ್ಯ ಸಿದ್ದಲಿಂಗಯ್ಯ ಅಭಿಪ್ರಾಯಪಟ್ಟರು.
ತಾಲೂಕಿನ ಮೇಳೆಕಲ್ಲಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರಕಾರಿ ಶಾಲೆಗಳಲ್ಲಿ ಏಲ್ಲಾ ರೀತಿಯ ಸೌಲಭ್ಯಗಳನ್ನು ಸರಕಾರ ನೀಡುತ್ತಿದ್ದರೂ ಪೋಷಕರು ಖಾಸಗಿ ಶಾಲೆಗಳ ಕಡೆಗೆ ಮುಖ ಮಾಡುತ್ತಿರುವುದು ಸರಿಯಲ್ಲ. ಖಾಸಗಿ ಶಾಲೆಗಳು ಕೇವಲ ಅಲಂಕಾರಿಕ ಮಾಧ್ಯಮಗಳಾಗಿದ್ದು ಅಲ್ಲಿ ವ್ಯಾಸಂಗ ಮಾಡುವ ಮಕ್ಕಳು ಶ್ರಿಮಂತಿಕೆಯಿಂದ   ಬೆಳೆಯುತ್ತವೆಯೇ ಹೊರೆತು ಸಾಮಾಜಿಕ ಮೌಲ್ಯಗಳನ್ನಾಗಲಿ ಗುಣಮಟ್ಟದ ಶಿಕ್ಷಣವನ್ನಾಗಲಿ ಪಡೆಯಲು ಸಾಧ್ಯವಿಲ್ಲ ಎಂದರು.  
ಎಸ್ಡಿಎಂಸಿ ಅಧ್ಯಕ್ಷ ರವಿಕುಮಾರ್ ಮಾತನಾಡಿ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಬ್ಯಾಗ್, ಸಮವಸ್ತ್ರ, ಬಿಸಿ ಊಟ, ಕ್ಷೀರಭಾಗ್ಯದಂತಹ ಹಲವು ಮಹತ್ವದ ಯೋಜನೆಗಳಿದ್ದು ಅಂತಹ ಯೋಜನೆಗಳು ಗ್ರಾಮೀಣ ಮಕ್ಕಳಿಗೆ ವರದಾನವಾಗಿವೆ. ಗ್ರಾಮೀಣ ಮಕ್ಕಳಿಗೆ ಶಿಕ್ಷಕರು ಸರಿಯಾದ ರೀತಿಯಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಿದರೆ ನಗರ ವಿದ್ಯಾರ್ಥಿಗಳಿಗಿಂತ ಉತ್ತಮವಾಗಿ ಅಭ್ಯಾಸ ಮಾಡಿ ಸಮಾಜಕ್ಕೆ ಮಹತ್ವದ ಕೂಡುಗೆ ನೀಡುತ್ತಾರೆ ಎಂದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಶಾಲೆಗಳಲ್ಲಿ ಪಠ್ಯದ ಜೊತೆಗೆ  ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಕಲಿಸುವುದರಿಂದ ಮಕ್ಕಳು ಎಲ್ಲಾ ರೀತಿಯಿಂದಲೂ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ಗುಣಮಟ್ಟದ ಮೌಲ್ಯಾಧಾರಿತ ಶಿಕ್ಷಣ ನೀಡುವತ್ತ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಉಪಾದ್ಯಕ್ಷೆ ಲಕ್ಷಮ್ಮ ಮುಖ್ಯ ಶಿಕ್ಷಕ ತಿಮ್ಮಯ್ಯ, ಚಂದ್ರಯ್ಯ, ಲಕ್ಕಣ್ಣ ಹಾಗೂ ಗ್ರಾಮಸ್ಥರು ಪೋಷಕರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.