ತುಮಕೂರು

ಇಂದು ಕಚೇರಿ ಉದ್ಘಾಟನೆ

Published On :

ತುಮಕೂರು: ತುಮಕೂರು ಅಮಾನಿಕೆರೆ ಮುಂಭಾಗ ನೂತನವಾಗಿ ನಿರ್ಮಿಸಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಫೆ. 28 ರಂದು ಬೆಳಿಗ್ಗೆ 9.30ಕ್ಕೆ ಆಯೋಜಿಸಲಾಗಿದೆ.  ಸಚಿವ ಟಿ.ಬಿ. ಜಯಚಂದ್ರ ಕಾರ್ಯಕ್ರಮ ಉದ್ಘಾಟಿಸುವರು.  ವಿಶೇಷ ಆಹ್ವಾನಿತರಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಆಗಮಿಸುವರು.  ತುಮಕೂರು ಶಾಸಕ ಡಾ. ರಫೀಕ್ ಅಹಮದ್ ಅಧ್ಯಕ್ಷತೆ ವಹಿಸುವರು.
ಸಾರ್ವಜನಿಕರ ಗಮನಕ್ಕೆ
ತುಮಕೂರು: ಗುಬ್ಬಿ ತಾಲೂಕಿನಲ್ಲಿ ನೂತನವಾಗಿ ನಿರ್ಮಿಸಿರುವ 9.5 ಕಿ.ಮೀ. ಉದ್ದದ 110 ಕೆ.ವಿ. ಬಿದರೆ ಒಂಟಿ ಪ್ರಸರಣಾ ಮಾರ್ಗವನ್ನು ವಿದ್ಯುದ್ದೀಕರಿಸಲಿದ್ದು, ಸಾರ್ವಜನಿಕರು ಎಚ್ಚರ ವಹಿಸುವಂತೆ ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತ ಕಾರ್ಯನಿರ್ವಾಹಕ ಎಂಜನಿಯರ್ ಅವರು ತಿಳಿಸಿದ್ದಾರೆ.  ಈ ಮಾರ್ಗ ಗುಬ್ಬಿ ತಾಲೂಕಿನ ಸಿಂಗೋನಹಳ್ಳಿ, ಚಿಕ್ಕನೆಟ್ಟಗುಂಟೆ, ಲಕ್ಕನಹಳ್ಳಿ, ರಂಗನಾಥಪುರ, ಕೋಣನಕಲ್ಲು, ಬಿದರೆ ಗ್ರಾಮಗಳ ಸರಹದ್ದಿನಲ್ಲಿ ಹಾದು ಹೋಗಲಿದ್ದು, ಸಾರ್ವಜನಿಕರು ಗೋಪುರಗಳನ್ನು ಹತ್ತುವುದಾಗಲೀ, ಲೋಹದ ತಂತಿ, ಹಸಿರು ಬಳ್ಳಿ, ಕೊಂಬೆ ಇತ್ಯಾದಿಗಳನ್ನು ವಿದ್ಯುತ್ ಪ್ರವಹಿಸುವ ತಂತಿಗಳಿಗೆ ಎಸೆಯುವುದಾಗಲೀ ಅಥವಾ ದನಕರುಗಳನ್ನು ಗೋಪುರಗಳಿಗೆ ಕಟ್ಟುವುದಾಗಲೀ ಮಾಡಬಾರದಾಗಿ ತಿಳಿಸಿದ್ದಾರೆ. ಇಂತಹ ಕೃತ್ಯಗಳನ್ನು ಎಸಗಿದಲ್ಲಿ ಉಂಟಾಗುವ ಅಪಘಾತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಯಾವುದೇ ರೀತಿಯಲ್ಲೂ ಜವಾಬ್ದಾರಿಯಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.