ದೊಡ್ಡಹಳ್ಳಿ ಗ್ರಾಮಕ್ಕೆ ವಾಜಪೇಯಿ ವಸತಿ ಶಾಲೆ ಮಂಜೂರು: ಚೌದರಿ
ಪಾವಗಡ: ತಾಲೂಕಿನ ದೊಡ್ಡಹಳ್ಳಿ ಗ್ರಾಮಕ್ಕೆ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಸರ್ಕಾರದಿಂದ ಮಂಜೂರಾಗಿರುವುದಾಗಿ ತಾ.ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ವೈ.ಆರ್. ಚೌದರಿ ತಿಳಿಸಿದರು.
ಅವರು ಸುದ್ದಿಗಾರರೊಂದಿಗೆ ಮಾತನಾಡಿ ಗಡಿ ಭಾಗದ ಬಡ ಮಕ್ಕಳ ಶೈಕ್ಷಣಿಕ ಪ್ರಗತಿ ಹಿನ್ನೆಲೆಯಲ್ಲಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಆಸಕ್ತಿ ವಹಿಸಿ ಸರ್ಕಾರದ ವತಿಯಿಂದ ತಾಲೂಕಿಗೆ ಎ.ಬಿ.ವಾಜಪೇಯಿ ವಸತಿ ಶಾಲೆ ಮಂಜೂರಾಗಿದೆ. ಕೂಡಲೇ ಗಡಿ ಭಾಗದ ತಾಲೂಕಿನ ದೊಡ್ಡಹಳ್ಳಿ ಗ್ರಾಮದಲ್ಲಿ ಉನ್ನತ ವಸತಿ ಶಾಲೆ ನಿರ್ಮಿಸುವುದಾಗಿ ಅವರು ತಿಳಿಸಿದರು. ಉಚಿತ ಪಠ್ಯ ಪುಸ್ತಕ, ಶುದ್ಧ ಕುಡಿಯುವ ನೀರು, ಸುಸಜ್ಜಿತ ವಾತಾವರಣ ಹಾಗೂ ಇತರೆ ಮೂಲಭೂತ ಸೌಲಭ್ಯಗಳು ಇವೆ. ವಾಜಪೇಯಿ ಶಾಲೆಯಲ್ಲಿ ವಸತಿ ಸೌಲಭ್ಯವಿರುವುದರಿಂದ 6ರಿಂದ 12ನೇ ತರಗತಿಯವರೆಗೆ ಅಂದರೆ ಒಟ್ಟು ತಾಲೂಕಿನ 580 ಮಂದಿ ಬಡ ವಿದ್ಯಾರ್ಥಿಗಳಿಗೆ ಎ.ಬಿ.ಪಾಜಪೇಯಿ ವಸತಿ ಶಾಲೆ ಸಹಕಾರಿಯಾಗಲಿದೆ ಎಂದರು.
ದೊಡ್ಡಹಳ್ಳಿ ಗ್ರಾಮದಲ್ಲಿ ವಾಜಪೇಯಿ ವಸತಿ ಶಾಲೆ ನಿರ್ಮಾಣಕ್ಕೆ ನಿವೇಶನ ಕೊರತೆಯನ್ನು ಮನಗಂಡ ಬೆಂಗಳೂರಿನ ವಾಸಿ ದೊಡ್ಡಹಳ್ಳಿ ಗ್ರಾಮದ ನಿವೃತ್ತ ವಿಶೇಷ ಜಿಲ್ಲಾಧಿಕಾರಿ ಎಚ್. ರಾಮಾಂಜಿನೇಯ ಹಾಗೂ ಅವರ ಸಹೋದರ ಎಚ್. ವೆಂಕಟೇಶ್ ಚೌದರಿ ಗ್ರಾಮದ ಹೆದ್ದಾರಿಪಕ್ಕದಲ್ಲಿರುವ 8 ಎಕರೆ ಜಮೀನನ್ನು ಉಚಿತವಾಗಿ ದಾನ ನೀಡಿ ವಸತಿ ಶಾಲೆ ನಿರ್ಮಾಣಕ್ಕೆ ಸಹಕರಿಸಿದ್ದಾರೆಂದು ಅವರು ತಿಳಿಸಿದರು.
ಕೋಟ್ಯಂತರ ರು. 8ಎಕರೆ ಜಮೀನು ಉಚಿತವಾಗಿ ನೀಡಿ ದೊಡ್ಡಹಳ್ಳಿ ಗ್ರಾಮದಲ್ಲಿ ಅಟಲ್ ಬಿಹಾರಿ ಪಾಜಪೇಯಿ ವಸತಿ ಶಾಲೆ ನಿರ್ಮಾಣಕ್ಕೆ ಸಹಕರಿಸಿದ ನಿವೃತ್ತ ವಿಶೇಷ ಜಿಲ್ಲಾಧಿಕಾರಿ ದೊಡ್ಡಹಳ್ಳಿ ಗ್ರಾಮದ ಎಚ್.ರಾಮಾಂಜಿನೇಯ ಹಾಗೂ ಎಚ್.ವೆಂಕಟೇಶ್ ಚೌದರಿ ಅವರ ಉದಾರತೆಯನ್ನು ಪ್ರಶಂಶಿಸಿದ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹಾಗೂ ಇತರೆ ಮುಖಂಡರು ಶೈಕ್ಷಣಿಕ ಪ್ರಗತಿಗೆ ಸಹೋದರರ ಸಾಮಾಜಿಕ ಕಳಕಳಿಯ ಬಗ್ಗೆ ಅಭಿನಂದನೆ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

