ವಿವಾಹಕ್ಕೆ ಮುನ್ನ ಎಚ್ಐವಿ ಪರೀಕ್ಷೆ ಮಾಡಿಸಿಕೊಳ್ಳಿ'
ಮಧುಗಿರಿ: ವಿವಾಹಕ್ಕೆ ಮುನ್ನ ಎಲ್ಲರೂ ಎಚ್ಐವಿ ಪರೀಕ್ಷೆ ಮಾಡಿಸಿಕೊಂಡ ಬಳಿಕವೇ ಮದುವೆಗೆ ಸಹಮತ ಸೂಚಿಸಿದಾಗ ಮಾತ್ರ ಏಡ್ಸ್ ಮಹಾಮಾರಿಗೆ ಕಡಿವಾಣ ಹಾಕಲು ಸಾಧ್ಯ ಎಂದು ತಾಲೂಕು ಆಸ್ಪತ್ರೆ ಐಸಿಟಿಸಿ ಕೇಂದ್ರದ ಆಪ್ತ ಸಮಾಲೋಚಕಿ ಸುಮಾಮಣಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕ, ಏಡ್ಸ್ ಪ್ರಿವೆನ್ಷನ್ ಸೊಸೈಟಿ ಹಾಗೂ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ಏರ್ಪಟಿಸಿದ್ದ ಎಚ್ಐವಿ ತಡೆಯುವಲ್ಲಿ ಯುವ ಜನರ ಪಾತ್ರ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಅತಿ ಶೀಘ್ರ ಹರಡುತ್ತಿರುವ ಈ ಮಾರಕ ರೋಗಕ್ಕೆ ಯುವ ಜನಾಂಗ ಬಲಿಯಾಗುತ್ತಿದ್ದು, ಹದಿ ಹರೆಯದ ಯುವಕ-ಯುವತಿಯರು ಈ ಬಗ್ಗೆ ಅತಿ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು. ಮುಖ್ಯ ಅತಿಥಿ ಪ್ರೊ.ಸಿದ್ದಪ್ಪ ಏಡ್ಸ್ ಹರಡುವ ವಿಧಾನಗಳ ಬಗ್ಗೆ ಸಮರ್ಪಕ ಮಾಹಿತಿ ಪಡೆಯುವ ಮೂಲಕ ಈ ಮಹಾಮಾರಿಯನ್ನು ನಿಯಂತ್ರಿಸಬಹುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಇತಿಹಾಸ ಪ್ರಾಧ್ಯಾಪಕ ಪ್ರೊ.ಪಾಂಡುರಂಗ ಬಡತನ, ನಿರುದ್ಯೋಗ ಮತ್ತಿತರ ಸಮಾಜಿಕ ಅನಿಷ್ಟಗಳಿಂದ ಬಹುತೇಕರು ಲೈಂಗಿಕ ಕಾರ್ಯಕರ್ತರಾಗುವುದರಿಂದ ಎಚ್ಐವಿ ಏಡ್ಸ್ ಇತರೆ ಮಾರಣಾಂತಿಕ ಕಾಯಿಲೆಗಳಿಂದ ನರಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದಕಾರಣ ಉತ್ತಮ ಶಿಕ್ಷಣ ಉದ್ಯೋಗ ಪಡೆಯುವ ಮೂಲಕ ಯುವ ಸಮೂಹ ಜಾಗೃತಗೊಳ್ಳಬೇಕು ಎಂದರು.
ಪ್ರಾಧ್ಯಾಪಕ ಟಿ.ಎನ್. ನರಸಿಂಹಮೂರ್ತಿ, ನಾಗಭೂಷಣ, ರಾಮಾಂಜಿನಪ್ಪ, ಡಾ.ಎಸ್.ಆರ್. ಹನುಮಂತರಾಯಪ್ಪ, ಡಾ.ಜಗನ್ನಾಥ್ ಭಾಗವಹಿಸಿದ್ದರು. ಕಮಲ ಪ್ರಾರ್ಥಿಸಿ, ನವೀನ್ ಕುಮಾರ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

