'ಸುಶಿಕ್ಷಿತರಿಂದಲೇ ಹೆಚ್ಚಿನ ಭ್ರಷ್ಟಾಚಾರ ಆತಂಕಕಾರಿ ವಿಷಯ'
ಕುಣಿಗಲ್: ಸುಶಿಕ್ಷಿತರಿಂದಲೇ ಹೆಚ್ಚಿನ ಭ್ರಷ್ಟಾಚಾರಗಳು ನಡೆಯುತ್ತಿರುವುದು ನಿಜಕ್ಕೂ ಆತಂಕಕಾರಿ ವಿಷಯವಾಗಿದೆ. ಭ್ರಷ್ಟಾಚಾರ, ಅತ್ಯಾಚಾರ ಮುಕ್ತ ಬಲಿಷ್ಠ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಮೌಲ್ಯಾಧಾರಿತ ಶಿಕ್ಷಣ ನೀಡುವ ರೀತಿ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುವ ಮೂಲಕ ಸಾಮಾಜಿಕ ಪ್ರಜ್ಞೆ ಮೆರೆಯಬೇಕಿದೆ ಎಂದು
ಬೆಂಗಳೂರು ಧರ್ಮಾಧ್ಯಕ್ಷರಾದ ಡಾ.ಬರ್ನಾಡ್ ಮೊರಸ್ ತಿಳಿಸಿದರು. ಬುಧವಾರ ರಾತ್ರಿಪಟ್ಟಣದ ಜಿಕೆಬಿಎಂಎಸ್ ಶಾಲಾ ಮೈದಾನದಲ್ಲಿ ಪಟ್ಟಣದ ಸ್ಟೆಲ್ಲಾಮೇರಿಸ್ ಶಾಲೆಯ ರಜತಮಹೋತ್ಸವ ಕಾರ್ಯಕ್ರಮದ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಪಂ ಸದಸ್ಯೆ ಡಾ.ಬಿ.ಎನ್. ರವಿ, ಪ್ರಸ್ತುತ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಿದರೆ ಸಾಕು, ತಮ್ಮ ಜವಾಬ್ದಾರಿ ಮುಗಿದಂತೆ ಎಂಬ ಮನೋಭಾವ ಹೊಂದುತ್ತಿರುವುದು ನಿಜಕ್ಕೂ ಖೇದಕರ ಎಂದರು.
ತಹಸೀಲ್ದಾರ್ ಪುಟ್ಟನರಸಯ್ಯ, ಕ್ಷೇತ್ರಶಿಕ್ಷಣಾಧಿಕಾರಿ ಸಿದ್ದಯ್ಯ, ಫಾದರ್ ಮೋಸಸ್ ಇತರರಿದ್ದರು. ಸಂಸ್ಥೆಯ ಅಧ್ಯಕ್ಷರಾದ ಅಶೀರ್ವಾದ, ಉಪಾಧ್ಯಕ್ಷಕೆ ಮಾಗರೇಟ್ ವಿವಿಧ ಗಣ್ಯರನ್ನು ಸನ್ಮಾನಿಸಿದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನವನ್ನು ಬೃಹತ್ ವೇದಿಕೆಯನ್ನು ಏರ್ಪಡಿಸಿದ್ದು, ತಾಲೂಕಿನ ವಿವಿಧೆಡೆಯಿಂದ ಸಹಸ್ತಾರು ಮಂದಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

