ಗೂಬೆಹಳ್ಳಿಯಲ್ಲಿ ಪಶುಚಿಕಿತ್ಸಾ ಕೇಂದ್ರದ ಕಟ್ಟಡದ ಉದ್ಘಾಟನೆ
ಹುಳಿಯಾರು: ಹೋಬಳಿ ಗೂಬೆಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಪಶುಚಿಕಿತ್ಸಾ ಕೇಂದ್ರದ ಕಟ್ಟಡದ ಉದ್ಘಾಟನೆ ಶುಕ್ರವಾರ ಮಧ್ಯಾಹ್ನ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದು, ಶಾಸಕ ಸುರೇಶ್‌ಬಾಬು ಅಧ್ಯಕ್ಷತೆ ವಹಿಸುವರು. ಸಮಾರಂಭವನ್ನು ಲೋಕಸಭಾ ಸದಸ್ಯ ಜಿ.ಎಸ್. ಬಸವರಾಜು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯರಾದ ಹುಲಿನಾಯ್ಕರ್, ನಾರಾಯಣಸ್ವಾಮಿ, ಶಿವಯೋಗಿಸ್ವಾವು, ಮಾಜಿ ಶಾಸಕರಾದ ಕೆ.ಎಸ್. ಕಿರಣ್‌ಕುಮಾರ್, ಜೆ.ಸಿ. ಮಾಧುಸ್ವಾಮಿ, ಬಿ.ಲಕ್ಕಪ್ಪ, ಜಿ.ಪಂ.ಅಧ್ಯಕ್ಷೆ ಸಾಕಮ್ಮ, ಉಪಾಧ್ಯಕ್ಷೆ ಜಾನಮ್ಮ, ತಾ.ಪಂ.ಅಧ್ಯಕ್ಷ ನವೀನ್, ಉಪಾಧ್ಯಕ್ಷ ಜಯಣ್ಣ, ಜಿ.ಪಂ.ಸದಸ್ಯರಾದ ಲೋಹಿತಾಬಾಯಿ, ಮಂಜುಳಾ, ತಾ.ಪಂ. ಸದಸ್ಯರಾದ ಚೇತನಾ, ಪಶು ಇಲಾಖೆಯ ಉಪನಿರ್ದೇಶಕ ಪರಮೇಶ್ವರ, ತಹಸೀಲ್ದಾರ್ ಕಾಮಾಕ್ಷಮ್ಮ, ಇಓ ಕೃಷ್ಣನಾಯಕ್, ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ವೈದ್ಯರಾದ ಚಿ.ನಾ.ಹಳ್ಳಿಯ ಶಶಿಕುಮಾರ್, ಹುಳಿಯಾರಿನ ಮಂಜುನಾಥ್, ಬೆಳುಗುಲಿ ಗ್ರಾ.ಪಂ.ಅಧ್ಯಕ್ಷೆ ಕರಿಬಸಮ್ಮ, ಗೂಬೆಹಳ್ಳಿ ಗ್ರಾ.ಪಂ.ಉಪಾಧ್ಯಕ್ಷ ತಿಮ್ಮರಾಯಪ್ಪ ಸೇರಿದಂತೆ ಇತರರು ಆಗಮಿಸಲಿದ್ದಾರೆಂದು ಪಶುವೈದ್ಯ ಪರೀಕ್ಷಕ ಕುಮಾರಸ್ವಾಮಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳೇ ವಿಜ್ಞಾನ ಕಲಿಯುವ ನಿಟ್ಟಿನಲ್ಲಿ ಅಧ್ಯಯನ ಶೀಲರಾಗಿ
ಮಧುಗಿರಿ: ವಿದ್ಯಾರ್ಥಿಗಳು ಮೂಲ ವಿಜ್ಞಾನ ಕಲಿಯುವ ನಿಟ್ಟಿನಲ್ಲಿ ಅಧ್ಯಯನ ಶೀಲರಾಗಿ ವಿಜ್ಞಾನಿಗಳಾಗಿ ಎಂದು ವಿಜ್ಞಾನ ಕೇಂದ್ರದ ವಿಷಯ ಪರಿವೀಕ್ಷಕ ಬಿ.ಜಿ.ಹನುಮಂತರಾಯಪ್ಪ ಕರೆ ನೀಡಿದರು. ಇಲ್ಲಿನ ಸಿದ್ಧಾರ್ಥ ಪ್ರೌಢಶಾಲೆ ಆವರಣದಲ್ಲಿ ಕರ್ನಾಟಕ ವಿಜ್ಞಾನ ಪರಿಷತ್ತು ಮತ್ತು ಮಧುಗಿರಿ ವಿಜ್ಞಾನ ಕೇಂದ್ರ ಸಂಯುಕ್ತಾಶ್ರಯದಲ್ಲಿ ನಡೆದ ಶೈಕ್ಷಣಿಕ ಜಿಲ್ಲಾ ಮಟ್ಟದ ರಸ ಪ್ರಶ್ನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗ ಭಾಗವಹಿಸಿ ಮಾತನಾಡಿದರು. ಸಿದ್ಧಾರ್ಥ ಪ್ರೌಢಶಾಲೆ ಮುಖ್ಯ ಶಿಕ್ಷಕ ಹನುಮಂತರಾಯಪ್ಪ ಮೂಲ ವಿಜ್ಞಾನ ಕಲಿಯಲು ಇರುವ ಅವಕಾಶಗಳ ಬಗ್ಗೆ ಮಕ್ಕಳಿಗೆ ಮನವರಿಕೆ ಮಾಡಿ ಕೊಟ್ಟರು. ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕಾರ್ಯಕಾರಿ ಸಮಿತಿ ಸದಸ್ಯ ಎಂ.ಗಂಗಾಧರಪ್ಪ ಮಾತನಾಡಿದರು.
ಮಾ. 3ರಂದು ಮಧುಗಿರಿಗೆ ಸಿಎಂ ಸಿದ್ಧರಾಮಯ್ಯ
ಮಧುಗಿರಿ: ಮಾ. 3ರಂದು ಮಧುಗಿರಿಗೆ ಸಿಎಂ ಸಿದ್ಧರಾಮಯ್ಯ ಆಗಮಿಸಲಿದ್ದಾರೆ ಎಂದು ತಾಲೂಕು ಕಾಂಗ್ರೆಸ್ ಸಮಿತಿ ತಿಳಿಸಿದೆ. ಮಧುಗಿರಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಆರೋಗ್ಯ ತಪಾಸಣಾ ಶಿಬಿರ ಹಾಗೂ ಎಂ.ಎಸ್.ರಾಮಯ್ಯ ಸ್ಮಾರಕ ಭವನ ಉದ್ಘಾಟಿಸುವರು. ನಂತರ ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಶಾಸಕ ಕೆ.ಎನ್. ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಅಭಿಮಾನಿಗಳ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಚಿವರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಭಾಗವಹಿಸಲಿದ್ದಾರೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

