ತುಮಕೂರು

ಎತ್ತಿನಹೊಳೆ ಬಯಲುಸೀಮೆಗೆ ವರದಾನ

Published On :

ಹುಳಿಯಾರು: ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ನೀರಾವರಿ ಯೋಜನೆಗೆ ಶಾಸನ ಸಭೆಯಲ್ಲಿ  ಮಂಜೂರಾತಿ ದೊರೆತಿದ್ದು, ಶೀಘ್ರವೇ ಕಾಮಗಾರಿಯ ಶಂಕುಸ್ಥಾಪನೆ ನೆರವೇರಲಿದೆ ಎಂದು ಕಾನೂನು ಮತ್ತು ಸಂಸದೀಯ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿ ಟಿ.ಬಿ.ಜಯಚಂದ್ರ ಹೇಳಿದರು.
ಹೋಬಳಿಯ ಗೂಬೇಹಳ್ಳಿ ಗ್ರಾಮದಲ್ಲಿ ಶುಕ್ರವಾರ ಪ್ರಾಥಮಿಕ ಪಶು ಚಿಕಿತ್ಸಾ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿ, ಕುಡಿಯುವ ನೀರಿಗೂ ಬರ ಎದುರಿಸುತ್ತಿರುವ ಚಿ.ನಾ.ಹಳ್ಳಿ ತಾಲ್ಲೂಕಿಗೆ ಇದರಿಂದ ಹೆಚ್ಚಿನ ಪ್ರಯೋಜನ ದೊರೆಯಲಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇದಲ್ಲದೆ ತಾವು ಬಹು ವರ್ಷದಿಂದ ಕನಸು ಕಂಡಿದ್ದ  ಮತ್ತೊಂದು ಮಹತ್ವಾಕಾಂಕ್ಷೆಯ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ನಾಲೆಯ ಕಾಮಗಾರಿ ನಡೆಯುತ್ತಿದ್ದು, ತುಮಕೂರಿಗೂ ವಿಸ್ತರಿಸುವ ಯೋಜನೆಗೆ ಇನ್ನೊಂದು ತಿಂಗಳಲ್ಲಿ ಮಂಜೂರಾತಿ ದೊರಕಿಸಿ ಕೊಡುವ  ಭರವಸೆ ನೀಡಿದ ಅವರು ಚಿ.ನಾ.ಹಳ್ಳಿ ತಾಲೂಕಿನಲ್ಲಿ  ಪ್ಲೋರೈಡ್ ಅಂಶದ ಹೆಚ್ಚಳ ಹಾಗೂ ತಳಕಚ್ಚಿರುವ ಅಂತರ್ಜಲದಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು ಗಮನಕ್ಕೆ ಬಂದಿದ್ದು,ಶಾಶ್ವತ ಪರಿಹಾರಕ್ಕೆ ಯೋಜನೆ ರೂಪಿಸಿದ್ದು,ಇದಕ್ಕೆ ಸ್ಥಳೀಯ ಜನಪ್ರತಿನಿಧಿಗಳ ಸಹಕಾರ ಅಗತ್ಯ ಎಂದರು.
ಶಾಸಕ ಸಿ.ಬಿ.ಸುರೇಶ್‌ಬಾಬು ಮಾತನಾಡಿ, ರಾಜ್ಯ ಸರ್ಕಾರದ  ಸುವರ್ಣ ಗ್ರಾಮ ಹಾಗೂ ನಮ್ಮ ಊರು, ನಮ್ಮ ರಸ್ತೆ ಯೋಜನೆಗಳು, ಹಿಂದುಳಿದ ಗ್ರಾಮಗಳ ಅಭಿವೃದ್ಧಿಗೆ ಪೂರಕವಗಿದ್ದು, ಅವುಗಳನ್ನು ಮತ್ತೆ ಅನುಷ್ಠಾನಗೊಳಿಸುವಂತೆ ಜಿಲ್ಲಾ ಮಂತ್ರಿಗಳನ್ನು ಒತ್ತಾಯಿಸಿದ್ದಲ್ಲದೆ, ತಾಲೂಕಿನ ಐದು ಭಾಗಗಳಲ್ಲಿ ಪಶು ಆಸ್ಪತ್ರೆಗಳು ಬೇಕಾಗಿದ್ದು, ಸಚಿವರು ಮಂಜೂರು ಮಾಡಿಸುವಂತೆ ಮನವಿ ಮಾಡಿದರು. ಹುಳಿಯಾರಿನ ಸರ್ಕಾರಿ ಆಸ್ಪತ್ರೆಗೆ ಕೆ.ಎಸ್.ಹೆಚ್.ಡಿ.ಪಿ ಯೋಜನೆಯಿಂದ ರು.80 ಲಕ್ಷ ಹಣ ಮಂಜೂರಾಗಿದ್ದು, ಶೀಘ್ರವೇ ಶಂಕುಸ್ಥಾಪನೆ ನೇರವೇರಲಿದೆ ಎಂದರು. ತಾಲೂಕಿನಲ್ಲಿ ನಡೆಯುತ್ತಿರುವ ಹೇಮಾವತಿ ನೀರಾವರಿ ಯೋಜನೆಯ ಭೂ ಸ್ವಾಧೀನ ರೈತರಿಗೆ ಪರಿಹಾರ ಹಣ ಮಂಜೂರು ಮಾಡಿಸುವಂತೆ ಸಚಿವರನ್ನು ಒತ್ತಾಯಿಸಿದರು.
ತಾ.ಪಂ.ಅಧ್ಯಕ್ಷ ಕೆಂಕೆರೆ ನವೀನ್, ಜಿಪಂ ಉಪಾಧ್ಯಕ್ಷೆ ಜಾನಮ್ಮ, ಸದಸ್ಯರಾದ ಲೋಹಿತಾಬಾಯಿ,ಮಂಜುಳಾ, ತಾಪಂ ಸದಸ್ಯರಾದ ಚೇತನಾ,ಲತಾ, ಇಒ ಕೃಷ್ಣನಾಯಕ್, ಬಿಇಒ ಸಾ.ಚಿ.ನಾಗೇಶ್, ಜಿಲ್ಲಾ ಪಶು ಆಸ್ಪತ್ರೆ  ಸಹಾಯಕ ನಿರ್ದೇಶಕ ಡಾ.ನಾರಾಯಣ್, ಗ್ರಾಪಂಅಧ್ಯಕ್ಷೆ ಕರಿಬಸಮ್ಮ, ಉಪಾಧ್ಯಕ್ಷ ತಿಮ್ಮರಾಯಪ್ಪ, ಸದಸ್ಯೆ ಉಷಾ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.