ತುಮಕೂರು

ಮರ ಕಟಾವು: ಖಂಡನೆ

Published On :

ಶಿರಾ: ಕಲ್ಲುಕೋಟೆ ಸರ್ವೆ ನಂ. ಜ್ಯೋತಿನಗರ ಬಡಾವಣೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದ 10 ಎಕರೆ ವಿಸ್ತಾರದ ಪ್ರದೇಶದಲ್ಲಿ ಸುಮಾರು 18 ವರ್ಷಗಳಿಂದಲೂ ಅರಣ್ಯ ಇಲಾಖೆಯವರು ಬೆಳೆಸಿದ್ದ ಹೊಂಗೆ, ಬೇವು ಹಾಗೂ ಇತರೆ ಬಗೆಯ ಸುಮಾರು 200 ಕ್ಕೂ ಹೆಚ್ಚು ಮರಗಳನ್ನು ಜೆಸಿಬಿಯಿಂದ ನೆಲಕ್ಕುರುಳಿಸಲಾಗಿದೆ ಮತ್ತು ಅವುಗಳನ್ನು ಕಟಾವು ಮಾಡಿ ಮಾರಾಟ ಮಾಡಲಾಗಿದೆ ಈ ಕೃತ್ಯಕ್ಕೆ ಕಾರಣವಾದವರನ್ನು ಬಂಧಿಸಿ ತನಿಖೆಗೆ ಒಳಪಡಿಸಿ ಎಂದು ಶಿರಾ ಕಸಾಪ ನಿಕಟಪೂರ್ವ ಅಧ್ಯಕ್ಷ ಆರ್.ವಿ.ಪುಟ್ಟಕಾಮಣ್ಣ, ಪರಿಸರವಾದಿ ಸತೀಶ್ ಹಾಗೂ ಲೇಖಕ ಸುರೇಶ್ ಆಗ್ರಹಿಸಿದ್ದಾರೆ.
ಇಂದಿನಿಂದ ಕ್ರಿಕೆಟ್ ಟೂರ್ನಿ
ತಿಪಟೂರು: ತಾಲೂಕಿನ ಕಸಬಾ ಹೋಬಳಿ ಕರೀಕೆರೆ ಗ್ರಾಮದಲ್ಲಿ ಬ್ರಹ್ಮಲಿಂಗೇಶ್ವರ ಯುವಕ ಸಂಘದ ವತಿಯಿಂದ ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿಯು ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದೆ.  ಇಂದು ಮತ್ತು ನಾಳೆ ಪಂದ್ಯಗಳು ನಡೆಯಲಿದ್ದು, ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಪ್ರಥಮ ಬಹುಮಾನ ರು. 5001 ನಗದು, ಪಾರಿತೋಷಕ, ರನ್ನರ್ ಆಪ್ತ್‌ಂಡಕ್ಕೆ ದ್ವಿತೀಯ ರು. 3001 ನಗದು, ಪಾರಿತೋಷಕ, ತೃತೀಯ ರು. 1001 ನಗದು ಹಾಗೂ ಪಾರಿತೋಷಕ ಒಳಗೊಂಡಂತೆ ಬಹುಮಾನ ನೀಡಲಾಗುವುದು. ಆಸಕ್ತರು ಪ್ರವೇಶ ಶುಲ್ಕ ರು. 301 ನೀಡಿ ತಂಡದ ಹೆಸರನ್ನು ನೋಂದಾಯಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ. ಮಾಹಿತಿಗೆ. 9945301805, 9620392642.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.