ಬೂತ್ ಮಟ್ಟದ ಕಾರ್ಯಕರ್ತರ ನೇಮಕ ಶೇ.80ರಷ್ಟು ಪ್ರಗತಿ: ನಂದೀಶ್
ತಿಪಟೂರು: ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಸಂಪೂರ್ಣ ಸನ್ನದ್ದವಾಗಿದ್ದು, ಬೂತ್ ಮಟ್ಟದಿಂದಲೂ ಕಾರ್ಯಕರ್ತರನ್ನು ನೇಮಿಸುವ ಮೂಲಕ ತರಬೇತಿ ನೀಡಲಾಗುವುದು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ಬಿ. ನಂದೀಶ್ ತಿಳಿಸಿದರು.
ಲೋಕಸಭಾ ಚುನಾವಣೆ ಬಗ್ಗೆ ಮಾಹಿತಿ ನೀಡಲು ಅವರು ಪಟ್ಟಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬೂತ್ ಮಟ್ಟದ ಕಾರ್ಯಕರ್ತರ ನೇಮಕ ಜಿಲ್ಲೆಯಲ್ಲಿ ಶೇ.80ರಷ್ಟು ಪ್ರಗತಿಯಾಗಿದೆ. ಜನವರಿ ಮೊದಲ ವಾರದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಮತದಾರನ ಓಲೈಕೆಗೆ ತರಬೇತಿ ಕಾರ್ಯ ಆರಂಭವಾಗಲಿದೆ. ಚುನಾವಣೆಯ ಹಿನ್ನಲೆಯಲ್ಲಿ ಮೊದಲ ಹಂತ ನಿಧಿ ಸಂಗ್ರಹ ಕಾರ್ಯ ಪ್ರಾರಂಭವಾಗಲಿದ್ದು, ಬಿಜೆಪಿ ಕಾರ್ಯಕ್ರಮದಡಿ ಕಾಯಕರ್ತರು ಮನೆಮನೆಗಳಿಗೆ ತೆರಳಿ ಕನಿಷ್ಠ ಒಂದು ಸಾವಿರ ರು., ಗರಿಷ್ಠ ಐದು ಸಾವಿರ ರು.ವರೆಗೆ ನಿಧಿ ಸಂಗ್ರಹಿಸಲಿದ್ದಾರೆ ಎಂದರು.
ಜ.7ಮತ್ತು 8ರಂದು ಎಲ್ಲ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ತಯಾರಿಸಲು ಕೋರ್ ಕಮಿಟಿ ಸಭೆ ಕರೆಯಲಾಗಿದ್ದು, ಪ್ರತಿ ಕ್ಷೇತ್ರದಲ್ಲಿ ಎರಡು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದರು.
ಮಾಜಿ ಶಾಸಕ ಬಿ.ಸಿ.ನಾಗೇಶ್ ಮಾತನಾಡಿ 7 ತಿಂಗಳಾದರೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಿಕ್ಕುದೆಸೆ ಇಲ್ಲದೆ ನಡೆಯುತ್ತಿದ್ದು, ಕಾರ್ಯಕ್ರಮಗಳನ್ನು ಘೋಷಿಸುವುದು ಹಾಗೂ ವಾಪಸ್ ಪಡೆಯುವ ಕೆಲಸಗಳನ್ನು ಮಾಡುತ್ತಾ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಬಿಜೆಪಿ ಕಾಲದಲ್ಲಿ ಆಗಿದ್ದ ಕಾಮಗಾರಿಗಳಿಗೆ ಟೆಂಡರ್ ಕರೆದಿಲ್ಲ. ತಾಲೂಕಿನಲ್ಲೂ ಆಡಳಿತ ಕುಸಿದಿದ್ದು ಶಾಸಕರಿಗೆ ಆಡಳಿತ ಹಿಡಿತವೇ ಇಲ್ಲ ಎಂದು ದೂರಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಬಿಸಲೇಹಳ್ಳಿ ಜಗದೀಶ್, ಗಂಗರಾಜ್ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

