ಸಮಸ್ಯೆ ಬಗೆಹರಿಸುವಂತೆ ಪ್ರಾರ್ಥನ ಮಂದಿರದ ಪದಾಧಿಕಾರಿಗಳ ಮನವಿ
ಕ.ಪ್ರ.ವಾರ್ತೆ ಕುಣಿಗಲ್ ಜ.1
ಪುರಸಭೆಯ ಎಸ್‌ಎಫ್‌ಸಿ ಯೋಜನೆಯಡಿಯಲ್ಲಿ ಕೈಗೊಂಡ ಚರಂಡಿ ಕಾಮಗಾರಿ ಅರ್ಧಕ್ಕೆ ನಿಂತ ಪರಿಣಾಮ, ಪ್ರಾರ್ಥನಾ ಮಂದಿರಕ್ಕೆ ತೆರಳಲು ಭಕ್ತರಿಗೆ ಅನಾನುಕೂಲವಾಗುತ್ತಿದ್ದು ಅಗತ್ಯ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸುವಂತೆ ಪ್ರಾರ್ಥನ ಮಂದಿರದ ಪದಾಧಿಕಾರಿಗಳು, ಎರಡನೇ ವಾರ್ಡ್ ನಾಗರಿಕರು ಆಗ್ರಹಿಸಿದ್ದಾರೆ.
ಪುರಸಭೆಯ ಎರಡನೇ ವಾರ್ಡ್ ಪ್ರದೇಶದ ಮಲ್ಲಾಘಟ್ಟ ಜನತಾ ಕಾಲೋನಿಯಲ್ಲಿ 2009-10 ನೇ ಸಾಲಿನ ಎಸ್‌ಏಪ್‌ಸಿ ಯೋಜನೆ ಅಡಿಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿ ನಡೆಸಿದ್ದು, ಸದರಿ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ ಕಾರಣ ತೊಂದರೆ ಆಗಿದೆ.
ಈ ಸಮಸ್ಯೆ ಬಗೆಹರಿಸುವಂತೆ ಈಗಾಗಲೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದು, ಇನ್ನಾದರೂ ಪುರಸಭೆಯ ಆಡಳಿತಾಧಿಕಾರಿಗಳಾದ ಉಪವಿಭಾಗಾಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸುವಂತೆ ನಜೀರ್, ಜಬೀವುಲ್ಲಾ, ಶಬ್ಬೀರ್ ಅಹಮದ್ ಇತರರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

