ತುಮಕೂರು

ಕೂಡಲೇ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿಗಳ ಆದೇಶ

Published On :

ಶಿರಾ: ನಗರದ ಜಾಜಮ್ಮನ ಕಟ್ಟೆಗೆ ಕೊಳದಪ್ಪಲೇಶ್ವರ ಸ್ವಾಮಿ ದೇವಸ್ಥಾನದ ಗಡಿಯಿಂದ ಹರಿದು ಬರುವ ರಾಜ ಕಾಲುವೆಯ ಒತ್ತುವರಿಗೆ ಸಂಬಂಧಪಟ್ಟಂತೆ ಇದ್ದ ಸಮಸ್ಯೆ ಬಗ್ಗೆ ಬಾಲಾಜಿ ನಗರ ಹಾಗೂ ವಿದ್ಯಾನಗರ ನಾಗರಿಕರು ಜಿಲ್ಲಾಧಿಕಾರಿಗಳಿಗೆ ಬರೆದಿರುವ ಮನವಿ ಪತ್ರವನ್ನು ಪರಿಗಣಿಸಿರುವ ಜಿಲ್ಲಾಧಿಕಾರಿಗಳು ಕೂಡಲೇ ಕಾಲುವೆಯನ್ನು ಅಳತೆ ಮಾಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರಸಭೆಯ ಆಯುಕ್ತರಿಗೆ ಆದೇಶ ನೀಡಿದ್ದಾರೆ.
ಶಿರಾ ಜಾಜಮ್ಮನ ಕಟ್ಟೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ವಿವಿಧ ಜಮೀನುಗಳಿಂದ ಹರಿದು ಬರುವ ನೀರು ರಾಜಕಾಲುವೆ ಮೂಲಕ ಜಾಜಮ್ಮನ ಕಟ್ಟೆ ಸೇರಿ ಅಂತರ್ಜಲ ವೃದ್ಧಿಗೂ ಕಾರಣವಾಗಿದೆ. ಸರ್ವೇ ನಂ.89, 90, 91 ಹಾಗೂ 92 ರಲ್ಲಿ ಹಾದು ಹೋಗುವ ಕಾಲುವೆಯನ್ನೇ ಕೆಲವರು ನಿವೇಶನಗಳನ್ನಾಗಿ ಮಾಡಿಕೊಂಡಿದ್ದು ಕಾಲುವೆಯನ್ನೆ ನುಂಗಿ ಹಾಕಿದ್ದಾರೆ ಎಂದು ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.