ಶಿಕ್ಷಕರ ವೇತನ ವಿಳಂಬವಾಗದಂತೆ ಕ್ರಮಕೈಗೊಳ್ಳಿ: ಶಿವಯೋಗಿಸ್ವಾವು
ಗುಬ್ಬಿ: ಶಿಕ್ಷಕರ ಮಾಸಿಕ ವೇತನ ವಿಳಂಬವಾಗದಂತೆ ಸೂಕ್ತ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಡಾ.ಎ.ಎಚ್. ಶಿವಯೋಗಿಸ್ವಾವು ಸೂಚಿಸಿದರು.
ತಾಲ್ಲೂಕಿನ ಅಮ್ಮನಘಟ್ಟ ಸರ್ಕಾರಿ ಪ್ರೌಢಶಾಲೆಗೆ ಬುದವಾರ ಅನಿರೀಕ್ಷಿತ ಭೇಟಿ ನೀಡಿ ಮಾತನಾಡಿದ ಅವರು ಈ ಹಿಂದಿನಂತೆ ವೇತನ ಬಿಲ್ಲುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೇಲು ಸಹಿ ಮಾಡಿ ನಿಗದಿತ ಅವಧಿಯೊಳಗೆ ಶಿಕ್ಷಕರ ವೇತನ ದೊರೆಯುವಂತೆ ವ್ಯವಸ್ಥೆ ಇದ್ದು ಇದೇ ರೀತಿಯಲ್ಲಿ ಮುಂದುವರೆದರೆ ವೇತನ ವಿಳಂಬವಾಗುವ ತೊಂದರೆ ತಪ್ಪುತ್ತದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಸಂಬಂದಿಸಿದ ಅಧಿಕಾರಿಗಳು ವೇತನ ಬಿಲ್ಲುಗಳನ್ನು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಮೇಲುಸಹಿಗೆ ಕಳುಹಿಸದೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಟ್ಟದಲ್ಲೇ ವೇತನ ಬಿಲ್ಲುಗಳಿಗೆ ಮೇಲುಸಹಿ ಮಾಡಿಕೊಡಲು ಅನುವು ಮಾಡಿಕೊಡುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಗೆ ಸೂಚಿಸಿದರು. ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಳ ವೈದ್ಯಕೀಯ ವೆಚ್ಚದ ಬಿಲ್ಲುಗಳನ್ನು ನಿಗದಿತ ಅವಧಿಯಲ್ಲಿ ಮರುಪಾವತಿ ಮಾಡದೆ ಅನಗತ್ಯವಾಗಿ ಸಿಬ್ಬಂದಿಗಳನ್ನು ಸುತ್ತಾಡಿಸುತ್ತಿರುವುದು ಗಮನಕ್ಕೆ ಬಂದಿದ್ದು ಸಂಬಂಧಿಸಿದ ಅಧಿಕಾರಿಗಳು ನಿಗದಿತ ಅವಧಿಯೊಳಗೆ ಬಿಲ್ಲುಗಳಿಗೆ ಅನುಮೋದನೆ ನೀಡುವಂತೆ ಸೂಚಿಸಿದರು. ನೇರವಾಗಿ ಉಪನಿರ್ದೇಶಕರೇ ವೈದ್ಯಕೀಯ ವೆಚ್ಚದ ಬಿಲ್ಲುಗಳಿಗೆ ಮೇಲುಸಹಿಮಾಡಿ ನಿಗದಿತ ಅವಧಿಯಲ್ಲಿ ಬಿಲ್ಲುಗಳನ್ನು ಸಂಬಂಧಿಸಿದ ನೌಕರರಿಗೆ ಪಾವತಿಸುವಂತೆ ತಿಳಿಸಿದ ಅವರು ಶಿಕ್ಷಕರ ಮೂಲಭೂತ ಸಮಸ್ಯೆಗಳ ಬಗ್ಗೆ ಸದಾ ಸ್ಪಂಧಿಸುತ್ತಿದ್ದು ಮುಂದಿನ ದಿನಗಳಲ್ಲಿ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು. ವಿಧಾನ ಪರಿಷತ್ ಸದಸ್ಯರೊಂದಿಗೆ ತಾಲೂಕು ಬಿಜೆಪಿ ಅಧ್ಯಕ್ಷ ಎಚ್.ಟಿ. ಬೈರಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್, ಗಂಗಣ್ಣ, ಮುಖಂಡರುಗಳಾದ ಸಾಗರನಹಳ್ಳಿ ನಂಜೇಗೌಡ, ವಿಶ್ವನಾಥ್ ಇತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

