ಆನೇಕಲ್ಗೆ ನೀರು; ಸಂಸದ ಸುರೇಶ್, ಶಾಸಕ ಶಿವಣ್ಣ ಜತೆ ಸಭೆ ನಡೆಸಿದ ಸಿಎಂ
ಬೆಂಗಳೂರು: ಆನೇಕಲ್ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಯೋಜನೆ ಆರಂಭಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಡಿ.ಕೆ.ಸುರೇಶ್ ಹಾಗೂ ಸ್ಥಳೀಯ ಶಾಸಕ ಶಿವಣ್ಣ ನೇತೃತ್ವದ ನಿಯೋಗದ ಜತೆ ಗುರುವಾರ ಸಭೆ ನಡೆಸಿದರು.
ಆನೇಕಲ್ ಹಾಗೂ ಸುತ್ತಲಿನ ಪ್ರದೇಶಗಳು ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರು ಪೂರೈಕೆ ಸೇರಿದಂತೆ ದೀರ್ಘಾವಧಿ ಹಾಗೂ ತಕ್ಷಣದ ಯೋಜನೆ ಬಗ್ಗೆ ಈ ಸಂದರ್ಭದಲ್ಲಿ ಚರ್ಚೆ ನಡೆಯಿತು.
ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ಆನೇಕಲ್ ಶಿವಣ್ಣ, ಕಾವೇರಿ ನದಿಯಿಂದ ಬೆಂಗಳೂರು ನಗರಕ್ಕೆ 10 ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಳಕೆ ಮಾಡಿಕೊಳ್ಳಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆ ಪೈಕಿ 2 ಟಿಎಂಸಿ ನೀರನ್ನು ಆನೇಕಲ್ಗೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಆನೇಕಲ್ ಈಗ ಬೆಂಗಳೂರು ನಗರದ ಒಂದು ಭಾಗವೇ ಆಗಿದೆ. ಹೀಗಾಗಿ ಇಲ್ಲಿ ಮೂಲಸೌಕರ್ಯ ಸಮಸ್ಯೆ ಎದುರಾಗಿದೆ. ಈ ಬೇಡಿಕೆಯನ್ನು ತುರ್ತಾಗಿ ಪೂರೈಸುವಂತೆ ಮನವಿ ಮಾಡಿದ್ದೇವೆ ಎಂದರು.
ಇದರ ಜತೆಗೆ ತಾತಗುಣಿ ಪಂಪಿಂಗ್ ಸ್ಟೇಶನ್ ನಿಂದ ಆನೇಕಲ್ಗೆ 15 ಎಂಎಲ್ಡಿ ನೀರು ಬಿಡುಗಡೆ ಮಾಡುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಇದಕ್ಕೆ ರು. 250 ಕೋಟಿ ವೆಚ್ಚವಾಗುತ್ತದೆ. ಸದ್ಯದಲ್ಲೇ ಕ್ರಿಯಾ ಯೋಜನೆ ರೂಪಿಸುವ ಭರವಸೆ ನೀಡಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

