ತುಮಕೂರು

ಜೀತ ವಿಮುಕ್ತಿ ಕರ್ನಾಟಕ ಸಂಘಟನೆ ಪ್ರತಿಭಟನೆ

Published On :

ಪಾವಗಡ: ಒಡಿಶಾ ರಾಜ್ಯದ  ಗುತ್ತಿಗೆದಾರರು ಇಬ್ಬರು ಜೀತದಾಳುಗಳ ಕೈಗಳನ್ನು ಕತ್ತರಿಸಿ ಮಾರಣಾಂತಿಕ ಹಲ್ಲೆ ಮಾಡಿರುವುದನ್ನು ವಿರೋಧಿಸಿ ಪಾವಗಡ ತಾ. ಜೀತ ವಿಮುಕ್ತಿ ಕರ್ನಾಟಕ ವತಿಯಿಂದ ಮಂಗಳವಾರ ತಾ. ಕಚೇರಿಯ ಬಳಿ  ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ತೆರಳಿ ಘೋಷಣೆಗಳು ಕೂಗುತ್ತಾ ಜೀತದಾಳುಗಳ ಮೇಲೆ ದೌರ್ಜನ್ಯವೆಸಗಿದ ಒಡಿಶಾ ರಾಜ್ಯದ  ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಜರಗಿಸಲು ಸರ್ಕಾರಕ್ಕೆ ಅವರು ಒತ್ತಾಯಿಸಿದರು.
ಇದೇ ರೀತಿ ಕರ್ನಾಟಕ ರಾಜ್ಯದಲ್ಲಿ ಕೂಡ ಜೀತದಾಳಗಳ ಮೇಲೆ ಮಾಲೀಕರು ದೌರ್ಜನ್ಯ ಮಾಡುತ್ತಿರುವುದು ಸಾಮಾನ್ಯವಾಗಿದ್ದು ಮೈಸೂರು ಜಿಲ್ಲೆಯ ಎಚ್.ಡಿ ಕೋಟೆಯಲ್ಲಿ ಮಾಲೀಕರೊಬ್ಬರ ಬಳಿ ಕೆಲಸ ಮಾಡುತ್ತಿದ್ದ ಬಾಲನೊಬ್ಬನನ್ನು ಹಬ್ಬಕೆಂದು ಸ್ವಗಾಮಕ್ಕೆ ತೆರಳುವ ಸಂದರ್ಭದಲ್ಲಿ ಮಾಲೀಕರು ಹಲ್ಲೆ ಮಾಡಿದ ಪರಿಣಾಮ ಬಾಲಕ ಸಾವನ್ನಪ್ಪಿದ್ದಾನೆ. ಜೀತದಾಳುಗಳ ಮೇಲೆ ಮಾಲೀಕರ ದೌರ್ಜನ್ಯದ ಬಗ್ಗೆ ರಾಜ್ಯದಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದು ಇದನ್ನು ತಡೆಗಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಬೇಕೆಂದು ಅವರು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಉಪ ತಹಸೀಲ್ದಾರ್ ಹನುಮಂತಪ್ಪ ಮನವಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿಸುವುದಾಗಿ ತಿಳಿಸಿದರು.
ನಾಗಲಮಡಿಕೆ ಹೋಬಳಿ ಕಾರ್ಯಕರ್ತೆ ಶ್ಯಾಮಲ, ನಿಡಗಲ್ ವ್ಯಾಪ್ತಿಯ ಬಾಬು, ವೈ.ಎನ್.ಹೊಸಕೋಟೆ ಎಂ.ಎನ್.ಕೃಷ್ಣಮೂರ್ತಿ, ಕಸಬಾ ಅಂಜಿನಪ್ಪ, ಎನ್.ರಾಮಾಂಜಿ, ರಾಮಲಿಂಗಪ್ಪ ಮುಂತಾವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಈ  ಸಂದರ್ಭದಲ್ಲಿ ಸಿಪಿಐ ಭಾನುಪ್ರಕಾಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.