ತುಮಕೂರು

ರಸ್ತೆ ಸಮಗ್ರ ಅಭಿವೃದ್ಧಿಗೆ ಜೆಡಿಎಸ್ ಆಗ್ರಹ

Published On :

ಕುಣಿಗಲ್: ಕುಣಿಗಲ್ ಪಟ್ಟಣದಲ್ಲಿನ ಮತ್ತು ಹುಲಿಯೂರುದುರ್ಗದಲ್ಲಿ ಹಾದು ಹೋಗಿರುವ ಮುಖ್ಯರಸ್ತೆಯ ಸಮಗ್ರ ಅಭಿವೃದ್ಧಿಗೆ ಶಾಸಕ ಡಿ. ನಾಗರಾಜಯ್ಯು  ಅಗತ್ಯ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಮುಖಂಡ ಎಚ್.ಎ. ಜಯರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ವಿವರಿಸಿರುವ ಅವರು, ತಾಲೂಕಿನ ಪ್ರಮುಖ ಹೋಬಳಿ ಕೇಂದ್ರವಾಗಿ, ತಾಲೂಕು ಕೇಂದ್ರವಾಗುವ ಅರ್ಹತೆ ಇರುವ ಹುಲಿಯೂರುದುರ್ಗದಲ್ಲಿ, ರಸ್ತೆ ಅಗಲಿಕರಣ ಕಾರ್ಯವು ಶೇ.90ರಷ್ಟು ಪೂರ್ಣಗೊಂಡಿದ್ದು, ಉಳಿಕೆ ಶೇ.10ರಷ್ಟು ಪ್ರಗತಿಯಲ್ಲಿರುವ ವೇಳೆ ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಕಾರಣ ರಸ್ತೆ ಅಗಲೀಕರಣ, ಅಭಿವೃದ್ಧಿ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಈ ಹಿಂದೆ ಹುಲಿಯೂರುದುರ್ಗದ ಮುಖ್ಯರಸ್ತೆಯ ಅಗಲೀಕರಣ ಕಾಮಗಾರಿ ವೇಳೆಯಲ್ಲಿ ಇಂದಿನ ಶಾಸಕರೂ, ಸೇರಿದಂತೆ ಅವರ ಇಬ್ಬರು ಪುತ್ರರು, ರಸ್ತೆ ಅಗಲೀಕರಣ ಕಾರ್ಯಕ್ಕೆ ಅಡಚಣೆ ಉಂಟು ಮಾಡಿ, ಹುಲಿಯೂರುದುರ್ಗದ ಸಮಗ್ರ ಅಭಿವೃದ್ಧಿ ಹಿನ್ನಡೆಯಾಗುವಂತೆ ಮಾಡಿದ್ದಾರೆ.
ರಸ್ತೆ ಅಗಲೀಕರಣ ಕಾರ್ಯದ ನೆನೆಗುದಿಗೆ ಬಿದ್ದಕಾರಣ ಇಂದು, ಹುಲಿಯೂರುದರ್ಗದ ಪ್ರಮುಖ ರಸ್ತೆಯ ಇಕ್ಕೆಲಗಳಲ್ಲಿನ ಮಳಿಗೆ, ಮನೆ ಮಾಲೀಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ರಸ್ತೆ ಅಗಲೀಕರಣ ಕಾಮಗಾರಿ ಅರ್ಧಂಬರ್ಧ ಆಗಿರುವ ಕಾರಣ ಧೂಳುಮಯವಾಗಿ ಜನತೆಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ರಸ್ತೆಅಗಲೀಕರಣಕ್ಕೆ ಇರುವ ಅಡಚಣೆಯನ್ನು ಶಾಸಕರು, ಕೂಡಲೆ ವಿಶೇಷ ಗಮನ ಹರಿಸಿ ನಿವಾರಣೆ ಮಾಡುವಂತೆ, ಸಂತ್ರಸ್ತರಿಗೆ ಸೂಕ್ತ ಪರಿಹಾರ ದೊರಕಿಸಿಕೊಟ್ಟು, ರಸ್ತೆಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.