ಪ್ರಾಚಾರ್ಯ ಸಂಘದ ದಿನಚರಿ ಬಿಡುಗಡೆ
ತುಮಕೂರು: ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ ಹೊರತಂದಿರುವ ಶೈಕ್ಷಣಿಕ ದಿನಚರಿ ಮಾದರಿಯಾಗಿದೆ ಎಂದು ಸಿದ್ಧಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿ ಬಣ್ಣಿಸಿದ್ದಾರೆ.
ಅವರು ಸಿದ್ಧಗಂಗಾ ಮಠದಲ್ಲಿ ಪ.ಪೂ. ಕಾಲೇಜುಗಳ ಪ್ರಾಚಾರ್ಯರ ಸಂಘ ಹೊರತಂದಿರುವ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು.
ಕ್ಯಾಲೆಂಡರ್ನಲ್ಲಿ ಪ್ರತಿ ತಿಂಗಳು ನಡೆಯುವ ಶೈಕ್ಷಣಿಕ ಮುಖ್ಯಾಂಶ ದಾಖಲಿಸಿ ಕಾಲೇಜಿನ ಚಟುವಟಿಕೆಗಳಿಗೆ ಪೂರಕವಾಗಿ ಸ್ಪಂದಿಸಲಾಗಿದೆ. ಇದರ ಪ್ರಯೋಜನವನ್ನು ಪ್ರಾಚಾರ್ಯರು ಪಡೆದುಕೊಂಡು ಶೈಕ್ಷಣಿಕ ಚಟುವಟಿಕೆಗಳನ್ನು ಉತ್ತಮಪಡಿಸಿಕೊಳ್ಳಲಿ ಎಂದು ಆಶಿಸಿದರು.
ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಯಪ್ರಕಾಶ್ ಮಾತನಾಡಿ, ಸಂಘ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವುದರ ಜತೆಗೆ ನೌಕರರಿಗಾಗಿ ಸಹಕಾರ ಸಂಘ ಸ್ಥಾಪಿಸಿ ವಿವಿದೋದ್ದೇಶ ಚಟುವಟಿಕೆ ನಡೆಸಬೇಕೆಂದು ಸಲಹೆ ನೀಡಿದರು. ನಿವೃತ್ತ ಪ್ರಾಚಾರ್ಯ ಕೆ.ರಂಗನಾಥ್, ಎಸ್. ಕುಮಾರಸ್ವಾಮಿ, ಟಿ.ಎನ್. ಗೋವಿಂದರಾಜು, ಸಂಘದ ಶೈಕ್ಷಣಿಕ ಸಮಿತಿ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ, ಉಪಾಧ್ಯಕ್ಷ ಸಿ. ಪ್ರಕಾಶ್ ಕುಮಾರ್, ನಿರ್ದೇಶಕರಾದ ಎಸ್. ಸದಾಶಿವಯ್ಯ, ಟಿ.ಎ. ವಿಶ್ವೇಶ್ವರಯ್ಯ, ಸಿ.ಆರ್. ಕೃಷ್ಣಯ್ಯ, ವಿ.ಎನ್. ರಾಮಣ್ಣ, ಪ್ರಾಚಾರ್ಯರಾದ ಎ.ಆರ್. ಜಗದೀಶ್, ಹುಸೇನ್, ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

