ಕಂದಾಯ ಇಲಾಖೆ ಕ್ರಮಕ್ಕೆ ಬಿಜೆಪಿ ಆಕ್ರೋಶ
ಗುಬ್ಬಿ: ತಾಲೂಕಿನ ಅಮ್ಮನಘಟ್ಟ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕರೇಕಲಲ್ಬಾರೆಯಲ್ಲಿ ಕಳೆದ 40 ವರ್ಷಗಳಿಂದಲೂ ವಸತಿ ಸೌಲಭ್ಯ ಕಲ್ಪಿಸಿಕೊಂಡು ಬದುಕು ಸಾಗಿಸುತ್ತಿರುವ ಸುಮಾರು 80ಕ್ಕೂ ಹೆಚ್ಚು ಕುಟುಂಬಗಳನ್ನು ಒಕ್ಕಲೆಬ್ಬಿಸಲು ಹೊರಟಿರುವ ಕಂದಾಯ ಇಲಾಖೆಯ ಕ್ರಮ ಸರಿಯಲ್ಲ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಹೆಚ್.ಟಿ.ಬೈರಪ್ಪ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹುತೇಕ ಬಡತನ ರೇಖೆಗಿಂತ ಕೆಳಗಿನ ದಲಿತರು, ಹಿಂದುಳಿದವರು, ಪರಿಶಿಷ್ಟ ವರ್ಗ ಹಾಗೂ ಅಲ್ಪ ಸಂಖ್ಯಾತರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಸರ್ಕಾರದ ವಿವಿಧ ವಸತಿ ಯೋಜನೆಯಡಿ ಶಾಶ್ವತ ಮನೆ ನಿರ್ಮಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈಗಾಗಲೇ ಸಂಬಂಧಿಸಿದ ಗ್ರಾಮ ಪಂಚಾಯ್ತಿಯಿಂದ ಪಡೆದ ಅಧಿಕೃತ ಹಕ್ಕು ಪತ್ರಗಳನ್ನು ಪಡೆದುಕೊಂಡಿದ್ದಾರೆ. ಆದರೆ, ಇತ್ತೀಚೆಗೆ ಕಂದಾಯ ಇಲಾಖೆ ಅಧಿಕಾರಿಗಳು ಈ ಸ್ಥಳ ಸರ್ಕಾರಿ ಜಮೀನಾಗಿದ್ದು ಕೋಡಲೇ ತೆರವುಗೊಳಿಸುವಂತೆ ಅಲ್ಲಿನ ನಿವಾಸಿಗಳಿಗೆ ನೊಟೀಸ್ ನೀಡಿರುವುದು ಖಂಡನೀಯ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಬಿ.ಎಸ್.ಪಂಚಾಕ್ಷರಿ ಮಾತನಾಡಿ, ಕೆಎಸ್ಆರ್ಟಿಸಿ ಡಿಪೋ ನೆಪದಲ್ಲಿ ಕರೇಕಲ್ ಕೆಬ್ಬಾರೆ ನಿವಾಸಿಗಳನ್ನು ಒಕ್ಕಲೆಬ್ಬಿಸಲು ಹೊರಟಿರುವ ಅಧಿಕಾರಿಗಳ ಕ್ರಮ ಸರಿಯಲ್ಲ ಪಟ್ಟಣದ ಹೊರ ವಲಯದಲ್ಲಿ ಸಾಕಷ್ಟು ಸರ್ಕಾರಿ ಭೂಮಿ ಖಾಲಿ ಇದ್ದರೂ, ಅದನ್ನು ಬಳಸಿಕೊಳ್ಳದೆ, ಕಳೆದ ನಲವತ್ತು ವರ್ಷಗಳಿಂದ ಇಲ್ಲಿ ಬದುಕು ಸಾಗಿಸುತ್ತಿರುವ ಬಡ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಕ್ರಮ ಅವೈಜ್ಞಾನಿಕ ಕ್ರಮವಾಗಿದ್ದು ಈ ಕೂಡಲೇ ಹಿಂದೆ ಸರಿಯುವಂತೆ ಒತ್ತಾಯಿಸಿದರು. ಸಿದ್ದರಾಮಣ್ಣ, ಕಾರ್ಯದರ್ಶಿ ಲೋಕೇಶ್, ಗ್ರಾಪಂ ಸದಸ್ಯ ಈರಣ್ಣ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

