ತುಮಕೂರು

ಸಿದ್ಧಗಂಗಾ ಶ್ರೀ, ಕಂಚಿ ಶ್ರೀ ಭೇಟಿ ಮಾಡಿದ ಬಿಎಸ್‌ವೈ

Published On :

ತುಮಕೂರು: ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತುಮಕೂರಿಗೆ ಆಗಮಿಸಿ ತುಮಕೂರಿನ ಸಿದ್ದಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿ ಹಾಗೂ ಕಂಚಿ ಕಾಮಕೋಟಿಯ ಜಯೇಂದ್ರ ಸರಸ್ವತಿ ಶ್ರೀಗಳ ಆಶೀರ್ವಾದ ಪಡೆದರು.
ಮೊದಲು ಸಿದ್ಧಗಂಗಾ ಮಠಕ್ಕೆ ಆಗಮಿಸಿದ ಯಡಿಯೂರಪ್ಪ ಅವರು ಶ್ರೀಗಳ ಆಶೀರ್ವಾದ ಪಡೆದು ಗೌಪ್ಯವಾಗಿ ಮಾತುಕತೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಇನ್ನಿಬ್ಬರು ಶಾಸಕರ ಜೊತೆ ಮಾತಕತೆ ನಡೆಸಿದ್ದೇನೆ. ಅವರನ್ನು ಬಿಜೆಪಿಗೆ ಕರೆದುಕೊಂಡು ಬರಲು ಪ್ರಯತ್ನ ಮಾಡುತ್ತೇನೆ ಎಂದರು. ಬಿ.ಎಸ್. ಆರ್ ಕಾಂಗ್ರೆಸ್ ಮುಖ್ಯಸ್ಥ ಶ್ರೀರಾಮುಲು ಜೊತೆ ಮಾತನಾಡಿ ಅವರನ್ನು ಪಕ್ಷಕ್ಕೆ ತರುವ ಇಂಗಿತ ವ್ಯಕ್ತಪಡಿಸಿದರು.
ಹಾಗೆಯೇ ತುಮಕೂರು ಸಂಸದ ಜಿ.ಎಸ್. ಬಸವರಾಜು ಜತೆ ನಮ್ಮ ಸಂಬಂಧ ಸರಿಯಾಗಿದೆ. ಅವರ ಜೊತೆ ಮಾತುಕತೆ ಮಾಡಿ ಅವರನ್ನು ಪಕ್ಷದಲ್ಲೆ ಉಳಿಯುವಂತೆ ಮಾಡುತ್ತೇನೆ ಎಂದರು. ಯಡಿಯೂರಪ್ಪನವರು ಮಠಕ್ಕೆ ಆಗಮಿಸುವ ಮುನ್ನವೆ ಅವರ ಬರುವಿಕೆಗಾಗಿ ಮಾಜಿ ಸಚಿವ ಸೊಗಡು ಶಿವಣ್ಣ, ತಿಪಟೂರು ಮಾಜಿ ಶಾಸಕ ಬಿ.ಸಿ. ನಾಗೇಶ್ ಶಾಸಕ ಸುರೇಶಗೌಡ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಸೇರಿ ಬಿ.ಎಸ್.ವೈ ಅವರನ್ನು ಸ್ವಾಗತಿಸಿದರು. ಹಾಗೆ ಮಾಜಿ ಸಚಿವ ರೇಣುಕಾಚಾರ್ಯ ಯಡಿಯೂರಪ್ಪನವರಿಗೆ ಸಾಥ ಕೊಟ್ಟಿದ್ದರು.
ಗುರುವರ್ಯರ ಸೂಚನೆ ಮೇರೆಗೆ ಸೇರ್ಪಡೆ: ನಂತರ ತುಮಕೂರಿನ ಶೃಂಗೇರಿ ಶಂಕರ ಮಠದಲ್ಲಿ ವಾಸ್ತವ್ಯ ಹೂಡಿದ್ದ ಕಂಚಿ ಕಾಮಕೋಟಿ ಪೀಠಾಧಿಪತಿ ಜಯೇಂದ್ರ ಸರಸ್ವತಿ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಗುರುವರ್ಯರ ಸೂಚನೆ ಮೇರೆಗೆ ತಾವು ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ತಿಳಿಸಿದರು. ನಾನು ಕಾರಣಾಂತರಗಳಿಂದ ಬೆಳೆದಿದ್ದ ಪಕ್ಷದಿಂದ ಹೊರ ಬಂದಿದ್ದ ಸಂದರ್ಭದಲ್ಲಿ ಅನೇಕ ಯತಿವರ್ಯರು ರಾಜ್ಯದ ಹಿತದೃಷ್ಟಿಯಿಂದ ಮತ್ತೆ ಮಾತೃ ಪಕ್ಷಕ್ಕೆ ಮರಳಬೇಕೆಂದು ಸೂಚನೆ ನೀಡಿದ್ದನ್ನು ಸ್ಮರಿಸಿಕೊಂಡರು.
ರಾಜ್ಯ ಹಾಗೂ ರಾಷ್ಟ್ರದ ಪರಿಸ್ಥಿತಿ ಗಮನಿಸಿ ರಾಷ್ಟ್ರದ ಅಭಿವೃದ್ಧಿಗಾಗಿ ನರೇಂದ್ರ ಮೋದಿಯವರ ನಾಯಕತ್ವ ಅನಿವಾರ್ಯವೆಂದು ತೀರ್ಮಾನಿಸಿ ಮೋದಿಯವರಿಗೆ ಬೆಂಬಲಿಸಿ ಬಿಜೆಪಿಯಲ್ಲಿ ಕೆಜೆಪಿಯನ್ನು ವಿಲೀನಗೊಳಿಸಲು ತೀರ್ಮಾನ ಕೈಗೊಂಡೆ ಎಂದು ಯಡಿಯೂರಪ್ಪ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ್, ಶಾಸಕರಾದ ಸುರೇಶ್‌ಗೌಡ, ಮಾಜಿ ಸಚವ ರೇಣುಕಾಚಾರ್ಯ, ಎಸ್. ಶಿವಣ್ಣ, ಲೋಕೇಶ್ವರ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.