ಜೆಡಿಎಸ್ ಮಹಿಳಾ ಘಟಕದ ಪದಾಧಿಕಾರಿಗಳ ನೇಮಕ
ಕ.ಪ್ರ.ವಾರ್ತೆ ತುಮಕೂರು ಜ.4
ಪಕ್ಷದ ಸಂಘಟನೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾದದು. ಹಾಗಾಗಿ ಮಹಿಳೆಯರು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕೆಂದು ವಿಧಾನ ಪರಿಷತ್ ಸದಸ್ಯ ಡಾ. ಎಂ.ಆರ್. ಹುಲಿನಾಯ್ಕರ್ ಅಭಿಪ್ರಾಯಪಟ್ಟರು. ಅವರು ಶನಿವಾರ ಜೆಡಿಎಸ್ ಕಚೇರಿಯಲ್ಲಿ ನಡೆದ ಮಹಿಳಾ ಪದಾಧಿಕಾರಿಗಳ ನೇಮಕಾತಿ ಸಭೆಯ ನಂತರ ಮಾತನಾಡಿದರು. ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ, ಈ ನಿಟ್ಟಿನಲ್ಲಿ ಮಹಿಳೆಯರು ರಾಜಕೀಯ ಕ್ಷೇತ್ರದಲ್ಲೂ ಹಿಂದೆ ಬೀಳಬಾರದು ಎಂದು ತಿಳಿಸಿದರು. ನಗರಾಧ್ಯಕ್ಷೆಯಾಗಿ ಪುನರ್ ಆಯ್ಕೆಯಾದ ರಾಣಿಚಂದ್ರಶೇಖರ್ ಮಾತನಾಡಿ ಅನೇಕ ಮಹಿಳೆಯರು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ರಾಜಕೀಯವಾಗಿ ಹೆಸರು ಮಾಡಿರುವುದನ್ನು ನೋಡಿದ್ದೇವೆ. ಜನಸಂಖ್ಯೆಯ ಅರ್ಧಭಾಗದಷ್ಟಿರುವ ಮಹಿಳೆಯರು ಕೇವಲ ಓಟ್ ಬ್ಯಾಂಕ್ ಆಗದೆ, ಅಧಿಕಾರ ನಡೆಸುವಲ್ಲಿಯೂ ತನ್ನ ಕ್ಷಮತೆಯನ್ನು ತೋರಿಸಬಲ್ಲರು. ಈ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಅವರನ್ನು ಗುರುತಿಸಿ ಬೆಳೆಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಹೇಳಿದರು. ಈ ಸಭೆಯಲ್ಲಿ ಕುಸುಮ ಜಗನ್ನಾಥ್, ಪ್ರಮೀಳಾ ನಾಗೇಶ್, ಬೆಳ್ಳಿಲೋಕೇಶ್, ಮೋಸೀನಾ ಬಾನು, ತಾಹಿರಾ ಬಾನು, ಭಾಗ್ಯಮ್ಮ, ಯಶೋಧ, ಮಾತನಾಡಿದರು. ಸರ್ವಮಂಗಳ, ಜಯಶ್ರೀ, ಮಲ್ಲಿಕಾರ್ಜುನ್, ಪ್ರಸ್ ರಾಜಣ್ಣ, ಚಂದ್ರಬಾಬು, ಪುಟ್ಟರಾಜು, ಮಜಾಹಿದ್ ಮುಂತಾದವರು ಉಪಸ್ಥಿತರಿದ್ದರು.
ಪದಾಧಿಕಾರಿಗಳ ನೇಮಕ: ರಾಣಿ ಚಂದ್ರಶೇಖರ್- ನಗರಾಧ್ಯಕ್ಷರು, ಮೌಸಿನಾಬಾನು-ನಗರ ಉಪಾಧ್ಯಕ್ಷರು, ಪ್ರಮೀಳಾ ನಾಗೇಶ್-ಜಿಲ್ಲಾ ಪ್ರಾಧಾನ ಕಾರ್ಯದರ್ಶಿ, ಜಯಶ್ರೀ-ಜಿಲ್ಲಾ ಉಪಾಧ್ಯಕ್ಷರು ಹಾಗೂ ಪುಟ್ಟರಾಜು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಹಲವಾರು ವಾರ್ಡ್ಗಳ ಮಹಿಳೆಯರು ಪಕ್ಷಕ್ಕೆ ಸೇರ್ಪಡೆಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

