ಇಂದಿನಿಂದ ಸವಿತಾ ಸಮಾಜದ ರಜತ ಮಹೋತ್ಸವ
ಕುಣಿಗಲ್: ತಾಲೂಕಿನ ಸವಿತಾ ಸಮಾಜದ ರಜತ ಮಹೋತ್ಸವ, ಶ್ರೀ ಸವಿತಾ ಮಹರ್ಷಿಗಳ ಜಯಂತ್ಯುತ್ಸವ ಹಾಗೂ ತ್ಯಾಗರಾಜಸ್ವಾಮಿಗಳ ಆರಾಧನ ಮಹೋತ್ಸವವನ್ನು ಇದೇ 6ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
6ನೇ ತಾರಿಕು ಸೋಮವಾರ, ಪಟ್ಟಣದ ನವಚೇತನ ಅಂಧಮಕ್ಕಳ ಶಾಲೆಯ ವಿದ್ಯಾರ್ಥಿಗಳ ಉಚಿತ ಕ್ಷೌರ ಕಾರ್ಯಕ್ರಮ ಹಾಗೂ 11ಗಂಟೆಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಮಂಗಳವಾರ ಸವಿತಾ ಮಹರ್ಷಿಗಳ ಮತ್ತು ತ್ಯಾಗರಾಜ ಸ್ವಾಮಿಗಳ ಭಾವಚಿತ್ರವನ್ನು ಮಂಗಳ ವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ, ಬೈಕ್ ರ್ಯಾಲಿ ಹಮ್ಮಿಕೊಂಡಿದ್ದು, 11ಗಂಟೆಗೆ ತಿರುಮಲ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಸಾನಿಧ್ಯವನ್ನು ತುಮಕೂರು ರಾಮಕೃಷ್ಣ ವಿವೇಕಾನಂದಾಶ್ರಮದ ವೀರೇಶಾನಂದ ಸರಸ್ವತಿ ಸ್ವಾಮಿ ವಹಿಸಲಿದ್ದು, ಸಂಸದ ಡಿ.ಕೆ.ಸುರೇಶ, ಶಾಸಕ ಡಿ. ನಾಗರಾಜಯ್ಯ, ರಾಜ್ಯಾಧ್ಯಕ್ಷ ಸಂಪತ್ ಕುಮಾರ್ ಸೇರಿದಂತೆ ಮತ್ತಿತರೆ ಗಣ್ಯರು ಪಾಲ್ಗೊಳ್ಳಲಿದ್ದಾರೆಂದು ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

