ತುಮಕೂರು

'ಮಕ್ಕಳಿಗೆ ಶಿಕ್ಷಣ ಕೊಡಿಸುವ ಜವಾಬ್ದಾರಿ ಪೋಷಕರದ್ದು'

Published On :

ತಿಪಟೂರು: ಸರ್ಕಾರವು ನೀಡುತ್ತಿರುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನಹರಿಸಿ ಮಾದರಿ ಪ್ರಜೆಗಳಾಗಬೇಕೆಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮಕ್ಕಳಿಗೆ ಉಚಿತ  ಬೈಸಿಕಲ್ ಹಾಗೂ ಸಮವಸ್ತ್ರ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರದ ಮುಖ್ಯ ಉದ್ದೇಶ ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಬೇಕು. ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ಆದ್ದರಿಂದ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಶಾಲೆಗೆ ಕರೆತರುವ ಜವಾಬ್ದಾರಿ ಎಲ್ಲರ ಮೇಲಿದ್ದು, ತಮ್ಮ ಮಕ್ಕಳನ್ನು ಹೊಟೇಲ್, ಅಂಗಡಿ, ವರ್ಕ್‌ಶಾಪ್ ಮತ್ತಿತರೆಡೆ ಕೆಲಸಕ್ಕೆ ಸೇರಿಸದೆ ಶಿಕ್ಷಣ ಕೊಡಿಸಿ ಪ್ರಜ್ಞಾವಂತರನ್ನಾಗಿ ಮಾಡುವ ಜವಾಬ್ದಾರಿ ಪೋಷಕರದ್ದಾಗಿದೆ ಎಂದರು. ಶತಮಾನೋತ್ಸವ ಆಚರಿಸುವ ಈ ಶಾಲೆಗೆ ಅಗತ್ಯವಿರುವ ಸೌಲಭ್ಯಗಳನ್ನು ಸರ್ಕಾರದಿಂದ ಒದಗಿಸುವುದಾಗಿ ಭರವಸೆ ನೀಡಿದರು.  ಬಿಇಓ ಪ್ರಭುಸ್ವಾಮಿ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಸಮಾಜದ ನಿರ್ಮಾಣಕ್ಕೆ ಕಾರಣೀಭೂತರಾಗಬೇಕು. ಸರ್ಕಾರದಿಂದ ಉಚಿತವಾಗಿ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಸವಲತ್ತುಗಳನ್ನು ವಿತರಿಸುತ್ತಿದ್ದು, ಸೈಕಲ್‌ಗಳನ್ನು ಶಾಲೆಗೆ ಬಂದು ಹೋಗಲು ಮಾತ್ರ ಬಳಸಬೇಕೆಂದು ತಿಳಿಸಿ, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂದು ಮನವಿ ಮಾಡಿದರು.
 ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಕಿರುತೆರೆ ನಟ ದಯಾನಂದ್ ಸಾಗರ್ ಮಾತನಾಡಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಮಾರುಹೋಗದೆ ಶ್ರದ್ಧೆಯಿಂದ ವಿದ್ಯೆ ಕಲಿಯುವಂತೆ ತಿಳಿಸಿ, ಈ ಶಾಲೆಯಲ್ಲಿ ಓದಿದವರು ಇಂದು ರಾಜ್ಯ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನ ಪಡೆದಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಗೋಪಾಲ್, ತಾ.ಪಂ. ಸದಸ್ಯರಾದ ರಾಜು, ಜಯಣ್ಣ, ಪ್ರಾಂಶುಪಾಲ ಎಂ.ಬಿ.ಬಸವರಾಜು, ಉಪ ಪ್ರಾಂಶುಪಾಲರಾದ ಎಚ್.ಗಿರಿಜಾ, ಎಸ್.ಡಿ.ಎಂ.ಸಿ. ಸದಸ್ಯರಾದ ಪ್ರಕಾಶ್, ಉಮಾಪತಿ ಹಾಗೂ ಯೋಗನಂದಮೂರ್ತಿ ಉಪಸ್ಥಿತರಿದ್ದರು.  ನಾಗೇಶ್ವರಸ್ವಾಮಿ ಪ್ರಾರ್ಥಿಸಿ,
ಎ.ಆರ್.ಮಂಜುನಾಥ್ ಸ್ವಾಗತಿಸಿ, ಈಶ್ವರಯ್ಯ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.