ತುಮಕೂರು ವಿವಿಯಲ್ಲಿ ಬೌದ್ಧ ಪೀಠ ಸ್ಥಾಪನೆಗೆ ಚಿಂತನೆ
ತುಮಕೂರು: ವಿಶ್ವವಿದ್ಯಾನಿಲಯದಲ್ಲಿ ಭಗವಾನ್ ಬುದ್ಧ ಪೀಠ, ಕೇಂದ್ರ ಸ್ಥಾಪಿಸಿ ಬೌದ್ಧ ಅಧ್ಯಯನ ವಿಷಯದಲ್ಲಿ ಸರ್ಟಿಫಿಕೇಟ್ ಅಥವಾ ಡಿಪ್ಲೋಮಾ ಕೋರ್ಸ್ಗಳನ್ನು ಪ್ರಾರಂಭಿಸುವ ಪ್ರಸ್ತಾವನೆಯನ್ನು ಕುಲಪತಿಗಳಾದ ಪ್ರೊ.ಎ.ಎಚ್. ರಾಜಾಸಾಬ್ ಅವರು ಬೌದ್ಧ ಧರ್ಮಗುರು ದಲೈಲಾಮ ಅವರಲ್ಲಿ ಮಂಡಿಸಿದರು.
ತುಮಕೂರು ವಿಶ್ವವಿದ್ಯಾನಿಲಯವು ತನ್ನ ಶೈಕ್ಷಣಿಕ ಮತ್ತು ಬೌದ್ಧಿಕ ಕಾರ್ಯಕ್ರಮಗಳ ವಿಸ್ತರಣೆಗಾಗಿ ವಿವಿ ಕುಲಪತಿ ಪ್ರೊ. ಎ.ಎಚ್. ರಾಜಾಸಾಬ್ ಹಾಗೂ ಕುಲಸಚಿವ ಪ್ರೊ. ಡಿ. ಶಿವಲಿಂಗಯ್ಯ ಅವರು ಬೌದ್ಧ ಧರ್ಮ ಗುರು ದಲೈಲಾಮಾ ಅವರೊಂದಿಗೆ ಮಾತುಕತೆ ನಡೆಸಿದಾಗ ಈ ವಿಷಯ ಪ್ರಸ್ತಾಪಿಸಿದ್ದಾರೆ.
ಇದರಿಂದ ಹರ್ಷಿತರಾದ ದಲೈಲಾಮಾರವರು ಈ ಕೇಂದ್ರ ಅತ್ಯಂತ ಮಹತ್ವಪೂರ ವಾದ ಸಾಮಾಜಿಕ ಅಭಿವೃದ್ಧಿ, ಸಾಮಾಜಿಕ ಸ್ವಾಸ್ಥ್ಯ ಮತ್ತು ವಿಶ್ವಶಾಂತಿ ಕಾರ್ಯ ನಿರ್ವಹಿಸಲಿ ಎಂದು ಹಾರೈಸಿದರು.
ಇವರ ಜತೆಗೆ ವಿಶ್ವವಿದ್ಯಾನಿಲಯದ ಸಹ ಪ್ರಾಧ್ಯಾಪಕರಾದ ಡಾ. ರಮೇಶ್ ಬಿ, ಹಾಗೂ ಡಾ. ಕೆ.ಜಿ. ಪರಶುರಾಮ್ ಅವರೊಂದಿಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಬೈಲಕುಪ್ಪೆಯಲ್ಲಿರುವ ಸೆರಾ ಜೆ ಮೊನಾಸ್ಟಿಕ್ ಬೌದ್ಧ ವಿಶ್ವವಿದ್ಯಾನಿಲಯ ಮತ್ತು ತುಮಕೂರು ವಿಶ್ವವಿದ್ಯಾನಿಲಯಗಳ ಸಹಯೋಗದೊಂದಿಗೆ ಈ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳನ್ನು ಚರ್ಚಿಸಿದರು.
ಈ ವೇಳೆ ದಲೈಲಾಮಾ ಅವರು ಹೊಸ ಶತಮಾನದಲ್ಲಿನ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಅದರಲ್ಲೂ ವಿಶೇಷವಾಗಿ ಭ್ರಷ್ಟಾಚಾರದಂತಹ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಗೆಡುಹುತ್ತಿರುವ ಸಮಸ್ಯೆಗಳನ್ನು ಹೋಗಲಾಡಿಸುವ ಇಚ್ಛೆಯನ್ನು ವ್ಯಕ್ತಪಡಿಸಿದರು.
ಕಾರ್ಯಯೋಜನೆ ರೂಪಿಸಬೇಕಿದೆ: ವಿಶೇಷವಾಗಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಮೌಲ್ಯಗಳು ಮತ್ತು ನೈತಿಕತೆಯ ಆಯಾಮಗಳನ್ನು ಪ್ರಬಲವಾಗಿ ಅನುಷ್ಠಾನಗೊಳಿಸಿ ಪ್ರತಿ ವಿದ್ಯಾರ್ಥಿಯನ್ನೂ ಮೌಲ್ಯಯುತ ನೈತಿಕ ಬದುಕಿನ ವ್ಯಕ್ತಿತ್ವವಾಗಿ ರೂಪಿಸಿಕೊಳ್ಳುವುದಕ್ಕೆ ಶೈಕ್ಷಣಿಕ ಸಂಸ್ಥೆಗಳು ಸದೃಢ ಕಾರ್ಯಯೋಜನೆಯನ್ನು ರೂಪಿಸಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಲು, ಈ ಎರಡೂ ವಿಶ್ವವಿದ್ಯಾನಿಲಯಗಳು ಆಯೋಜಿಸುತ್ತಿರುವ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಈ ಕುರಿತು ವೈಜ್ಞಾನಿಕ ಚಿಂತನೆಯಾಗಬೇಕು ಎಂದು ತಿಳಿಸಿದರು.
ತುಮಕೂರು ವಿಶ್ವವಿದ್ಯಾನಿಲಯ ಮತ್ತು ಬೈಲಕುಪ್ಪೆಯ ಸೆರಾ-ಜೆ-ಮೊನಾಸ್ಟಿಕ್ ವಿಶ್ವವಿದ್ಯಾನಿಲಯಗಳು ಬೌದ್ಧಿಕ ಜ್ಞಾನ ವಿನಿಮಯವನ್ನು ವಿದ್ಯಾರ್ಥಿ ಹಾಗೂ ಅಧ್ಯಾಪಕರ ಮೂಲಕ ನೆರವೇರಿಸಿಕೊಂಡು, ಈ ಜ್ಞಾನವನ್ನು ಸಾಮಾಜಿಕ ಅಭಿವೃದ್ಧಿಗಾಗಿ, ಶಾಂತಿಯುತ ಸಾಮಾಜಿಕ ವಾತಾವರಣ ನಿರ್ಮಿಸಲು ಉಪಯೋಗಿಸಿಕೊಳ್ಳಬೇಕೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

