ತುಮಕೂರು

'ವಿದ್ಯಾರ್ಥಿಗಳು ಸರ್ಕಾರದ ಯೋಜನೆ ಸಮರ್ಪಕವಾಗಿ ಬಳಸಿಕೊಳ್ಳಲಿ'

Published On :

ಗುಬ್ಬಿ: ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಉತ್ತಮ ಪಡಿಸಲು ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದು ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕವಾಗಿ ಅಭಿವೃದ್ಧಿಹೊಂದುವಂತೆ ಗ್ರಾ.ಪಂ.ಅಧ್ಯಕ್ಷೆ ಗಾಯತ್ರಿ ಸಿದ್ದಯ್ಯ ಕರೆ ನೀಡಿದರು.
ತಾಲೂಕಿನ ಅಮ್ಮನಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಉಚಿತ ಬೈಸಿಕಲ್ ವಿತರಣೆ ಹಾಗೂ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ತರಲು ಸಹಕರಿಸಿದ ಶಾಲೆಯ ಶಿಕ್ಷಕರಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಾಲೆಗಳಲ್ಲಿ ವಿದ್ಯಾರ್ಥಿಗಳ ಅಗತ್ಯ ಮೂಲಭೂತ ಸೌಲಭ್ಯಗಳೂ ಸೇರಿದಂತೆ ಉಚಿತ ಪಠ್ಯ ಪುಸ್ತಕ, ಬೈಸಿಕಲ್, ಸಮವಸ್ತ್ರ ಮುಂತಾದ ಸವಲತ್ತುಗಳನ್ನು ಸರ್ಕಾರ ನೀಡುತ್ತಿದ್ದು ಮಕ್ಕಳು ಈ ಎಲ್ಲಾ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆದರ್ಶ ವಿದ್ಯಾರ್ಥಿಗಳಾಗಿ ರೂಪುಗೊಳ್ಳುವಂತೆ ತಿಳಿಸಿದರು. ಗ್ರಾ.ಪಂ.ಉಪಾಧ್ಯಕ್ಷ ಎ.ಆರ್. ಯತೀಶ್ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಸರ್ಕಾರ ಯೋಜನೆ ನೀಡುತ್ತಿದ್ದರೂ ಪೋಷಕರು ಸರ್ಕಾರಿ ಶಾಲೆಗೆ ಸೇರಿಸದೆ ಖಾಸಗಿ ಶಾಲೆಗಳತ್ತ ವಾಲುತ್ತಿರುವುದು ವಿಷಾದಕರ ಸಂಗತಿ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.