ಪ್ರತಿ ಶಾಲೆ ಪ್ರಜ್ಞಾವಂತ ನಾಗರಿಕರನ್ನು ಸೃಷ್ಟಿಸುವ ಜವಾಬ್ದಾರಿ ಹೊಂದಲಿ
ಶಿರಾ: ತಂದೆ ತಾಯಿ, ನಾಡು, ಬಂಧು-ಬಳಗವನ್ನು ಪ್ರೀತಿಯಿಂದ ಕಾಣುವ ಪ್ರಜ್ಞಾವಂತ ನಾಗರಿಕರನ್ನು ಸೃಷ್ಟಿಸುವ ಗುರುತರ ಜವಾಬ್ದಾರಿ ಪ್ರತಿಯೊಂದು ಶಾಲೆ ಹೊಂದಿದಾಗ ಮಾತ್ರ, ಉತ್ತಮ ಸಮಾಜ ನಿರ್ಮಾಣ ಸಾಧ್ಯವೆಂದು ಶ್ರೀಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದರು. ಅವರು ತಾಲೂಕಿನ ಲಕ್ಕನಹಳ್ಳಿ ಶ್ರೀಅರುಣೋಧಯ ವಿಧ್ಯಾಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದಿವ್ಯಸಾನ್ನಿಧ್ಯ ವಹಿಸಿ ಮಾತನಾಡಿದರು. ಪ್ರಸಕ್ತ ಶೈಕ್ಷಣಿಕ ಕ್ಷೇತ್ರದಲ್ಲಿ ನೂತನ ಬೋದನ ಪದ್ಧತಿಯಿಂದ ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದರೂ ಸಹ, ಅನಾಗರಿಕತೆ ಸೃಷ್ಟಿಯಿಂದ ಯುವ ಪೀಳಿಗೆ ತಪ್ಪು ದಾರಿ ಹಿಡಿಯುತ್ತಿದ್ದು, ಸಮಾಜದ ಸ್ವಾಸ್ತ್ಯ ಕದಡುವಂತಾಗಿದೆ. ಪ್ರತಿ ಯುವಕನನ್ನು ವಿದ್ಯಾರ್ಥಿ ಹಂತದಲ್ಲಿಯೇ ಪರಿಪೂರ್ಣ ವ್ಯಕ್ತಿಯಾಗಿ ರೂಪಿಸುವ ಹೊಣೆ ಶಿಕ್ಷಕರ ಮೇಲಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ರಾಜಕುಮಾರ್ ಮಾತನಾಡಿ ಶೈಕ್ಷಣಿಕ ಸಂಸ್ಥೆಗಳು ಮತ್ತು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನೀಡುವ ಪ್ರಮಾಣಿಕತೆಯ ಶಿಕ್ಷಣವೇ, ವಿದ್ಯಾರ್ಥಿ ಜೀವನದ ಯಶಸ್ವಿಗೆ ಭದ್ರ ಬುನಾದಿ. ಕಡಮೆ ಅಂಕಗಳಿಕೆ ಮಗುವಿನ ಶೈಕ್ಷಣಿಕ ಹಿನ್ನಡೆಗೆ ಕಾರಣವಲ್ಲ. ಮಾಡಿದ ತಪ್ಪನ್ನು ತಿದ್ದಿಕೊಳ್ಳುವ ಅವಕಾಶವಾಗಿದ್ದು ಇದರಿಂದ ಸಾಧಿಸುವ ಮನೋಬಲ ಹೆಚ್ಚಾಗಲಿದೆ ಎಂದರು.
ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಕೆ. ಮಂಜುನಾಥ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜ್ಞಾನಜ್ಯೋತಿ ಕಾಲೇಜು ಪ್ರಾಂಶುಪಾಲ ಪರಮೇಶ್ ಗೌಡ, ಅಂತ್ಯೋದಯ ವಿದ್ಯಾಸಂಸ್ಥೆ ಅಧ್ಯಕ್ಷ ಮುನಿಸ್ವಾಮಿ, ಇಸಿಓ ತಿಪ್ಪೇಸ್ವಾಮಿ, ಸಿಆರ್ಪಿ ಲಕ್ಷ್ಮಣ್, ಮುಖ್ಯ ಶಿಕ್ಷಕ ವೈರಮುಡಿ, ನಾಗರಾಜು, ಅಂಬಿಕಾ, ಮುಬಾರಕ್, ಮಹಮದ್ ಅಲಿ, ಸುರೇಶ್, ಬೀಬಿಹಾಜಿರ ಸೇರಿದಂತೆ ಹಲವರು ಹಾಜರಿದ್ದರು.
ಆಂಧ್ರ ಪ್ರದೇಶದ ಗಡಿ ಭಾಗವಾದ್ದರಿಂದ ಎರಡು ರಾಜ್ಯದ ಮಕ್ಕಳ ಸಮ್ಮಿಲನದಂತಿದ್ದ ಪುಟ್ಟ, ಪುಟ್ಟ ಮಕ್ಕಳ ಸಾಂಸ್ಕೃತಿಕ ಉತ್ಸವ ಆಕರ್ಷಕವಾಗಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

