'ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ'
ಮಳವಳ್ಳಿ: ಯುವಜನರಿಗೆ ಉದ್ಯೋಗ, ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕೆಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ರಾಜ್ಯಾಧಕ್ಷ ಭರತರಾಜ್ ಒತ್ತಾಯಿಸಿದರು.
ತಾಲೂಕಿನ ಬೆಳಕವಾಡಿ ಗ್ರಾಮದ ಕಟ್ಟೆ ಬಸವೇಶ್ವರ ದೇವಸ್ಥಾನದ ಬಳಿ ನಡೆದ ಗ್ರಾಮ ಘಟಕದ ಸಮ್ಮೇಳನದಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ನಿರುದ್ಯೋಗಿಗಳಾಗುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಗಳಿಂದಾಗಿ ಜೀವನ ನಿರ್ವಹಿಸಲು ಕಷ್ಟಕರವಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ.
ಯುವಕರು ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟಲು ಸ್ಥಳೀಯ ಸಂಪನ್ಮೂಲಗಳನ್ನು ಕೇಂದ್ರೀಕರಿಸಿ ಉದ್ಯಮಗಳನ್ನು ಸ್ಥಾಪಿಸಿ ಯುವಜನರಿಗೆ ಉದ್ಯೋಗ ನೀಡಬೇಕು. ಇಲ್ಲದಿದ್ದರೆ ಸರ್ಕಾರ ನಿರುದ್ಯೋಗ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು.
ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಯಾಗದೆ ರೈತರು ಸಂಕಷ್ಟದಲ್ಲಿದ್ದಾರೆ. ರಾಸಾಯಿನಿಕ ಗೊಬ್ಬರ ಔಷಧಿ ಕ್ರಿಮಿನಾಶಕಗಳ ಬೆಲೆಗಳು ಹೆಚ್ಚುತ್ತಿವೆ. ಇವುಗಳಿಗೆ ಸರ್ಕಾರ ನೀಡುತ್ತಿದ್ದ ಅನುದಾನವನ್ನು ಕಡಿತ ಮಾಡುತ್ತಿದ್ದು, ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಡಿವೈಎಫ್ಐ ಗ್ರಾಮ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತ್ತು. ಕಾರ್ಯಕ್ರಮದಲ್ಲಿ ತಿಮ್ಮೇಗೌಡ, ಗುರುಸ್ವಾಮಿ, ಚಂದ್ರು, ಮಹದೇವಸ್ವಾಮಿ, ಚಂದ್ರಶೇಖರಮೂರ್ತಿ ಮುಂತಾದವರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

