ತುಮಕೂರು

ಕನ್ನಡ ಅಧ್ಯಾಪಕರ ಸಂಘದ ಪದಾಧಿಕಾರಿಗಳ ಅವಿರೋಧ ಆಯ್ಕೆ

Published On :

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕೇಂದ್ರದಲ್ಲಿ ನಡೆದ ತುಮಕೂರು ವಿಶ್ವವಿದ್ಯಾನಿಲಯದ 2014-15 ನೇ ಸಾಲಿಗೆ ಕಾಲೇಜು ಕನ್ನಡ ಅಧ್ಯಾಪಕರ ಸಂಘದ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ ಓ. ನಾಗರಾಜು ಅಧ್ಯಕ್ಷರಾಗಿ, ಮಧುಗಿರಿ ಟಿ.ವಿ.ವಿ ಕಾಲೇಜಿನ, ಕೃಷ್ಣಪ್ಪ.ಸಿ ಉಪಾಧ್ಯಕ್ಷರಾಗಿ, ಮಹಿಳಾ ಉಪಾಧ್ಯಕ್ಷರಾಗಿ ತುಮಕೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಜಲಜಾಕ್ಷಿ, ಚಿ.ನಾ.ಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ಶಿವಲಿಂಗಮೂರ್ತಿ ಕಾರ್ಯದರ್ಶಿಯಾಗಿ, ತುಮಕೂರು ವಿ.ವಿಯ ಡಾ.  ಪಿ.ಎಂ. ಗಂಗಾಧರಯ್ಯ ಸಹ ಕಾರ್ಯದರ್ಶಿಯಾಗಿ, ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ. ಸುರೇಶ್ ಜಂಟಿ ಕಾರ್ಯದರ್ಶಿಯಾಗಿ, ಗುಬ್ಬಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೊ. ಗಂಗಾಧರಯ್ಯ ಖಜಾಂಚಿಯಾಗಿ ಸಭೆ   ಅವಿರೊಧವಾಗಿ ಆಯ್ಕೆ ಮಾಡಿತು.
ಇದೇ ಸಂದರ್ಭದಲ್ಲಿ ಪಲ್ಲಾಗಟ್ಟಿ ಅಡವಪ್ಪ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಜಿ.ಎಸ್. ರಮೇಶ್  ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಡಾ. ಓ.ನಾಗರಾಜು,  ಪ್ರೊ. ಜಗದೀಶ್, ಸರ್ವಮಂಗಳಮ್ಮ, ಪ್ರೊ. ಮಂಜೇಗೌಡ, ಡಾ. ಶಿವಲಿಂಗಮೂರ್ತಿ, ಡಾ. ಶಿವನಂಜಯ್ಯ, ಡಾ. ಬಾಳಪ್ಪ, ಡಾ. ಗೋವಿಂದರಾಯ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.