ತುಮಕೂರು

ಆಧುನಿಕ ಜೀವನ ಶೈಲಿಯಿಂದಾಗಿ ಆಡಂಬರ ಜೀವನ: ಪಚಾವೊ

Published On :

ಮಧುಗಿರಿ: ಆಧುನಿಕ  ಜೀವನ ಶೈಲಿಯಿಂದಾಗಿ ಮಕ್ಕಳು ಆಡಂಬರದ ಜೀವನಕ್ಕೆ ಮಾರು ಹೋಗಿ ತಪ್ಪು ಹೆಜ್ಜೆ ಇಡುತ್ತಿರುವುರಿಂದ ಅಪರಾಧ ಪ್ರಕರಣ ಹೆಚ್ಚುತ್ತಿವೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪಚಾವೊ ಅಭಿಪ್ರಾಯಪಟ್ಟರು.
ಶುಕ್ರವಾರ ಮಧುಗಿರಿಯ ಮಾಲೀಮರಿಯಪ್ಪ ರಂಗಮಂದಿರಲ್ಲಿ ತುಮಕೂರು ಜಿಲ್ಲಾ ಪ್ರಾಧಿಕಾರಿ,ತಾ.ಕಾನೂನು ಸೇವಾ ಸಮಿತಿ,ವಕೀಲರ ಸಂಘ,ರೋಟರಿ,ಪುರಸಭೆ,ಪೋಲಿಸ್ ಇಲಾಖೆ,ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ  ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಪ್ರಯುಕ್ತ ಏರ್ಪಟಾಗಿದ್ದ ಮಹಿಳೆಯರಿಗಾಗಿ ತಜ್ಞರಿಂದ ವಿಚಾರ ಸಂಕೀರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅತಿ ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ಮಕ್ಕಳು ಏಲ್ಲೋ ಒಂದು ಕಡೆ  ತಪ್ಪು ಹೆಜ್ಜೆ ಇಡುತ್ತಿದ್ದು,  ಅಪರಾಧಿಗಳು ಆಧುನಿಕ ತಂತ್ರಜ್ಞಾನ ಬಳಸಿ ಜೀವನದಲ್ಲಿ ಕಷ್ಟಪಡದೆ ಹಣ ದೋಚುತ್ತಿದ್ದು ಜನರ ನೆಮ್ಮದಿಗೆ ಭಂಗ ಉಂಟು ಮಾಡುತ್ತಿದ್ದಾರೆ. ಹಾಗಾಗಿ ನಮ್ಮ ಇಲಾಖೆ ಕೂಡ ಅಪರಾಧ ಪ್ರಕರಣ ತಡೆಗಟ್ಟಲು ಸಾಕಷ್ಟು ಪ್ರಮಾಣದಲ್ಲಿ ಶ್ರಮಿಸುತ್ತಿದೆ. ಆದರೂ ಅಪರಾಧ ಪ್ರಕರಣಗಳು ಅಧಿಕವಾಗುತ್ತಿದ್ದು ಇದನ್ನು ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅತಿ ಮುಖ್ಯ ಎಂದರು.
ಕಾನೂನು ಅರಿವು ಅಗತ್ಯ: ಜಿಲ್ಲಾ ಸತ್ರ ನ್ಯಾಯಾಧೀಶ ಎಚ್.ಬಿ. ಪ್ರಭಾಕರ್ ಶಾಸ್ತ್ರಿ ಮಾತನಾಡಿ, ಮನುಷ್ಯ ಜೀವನದಲ್ಲಿ ಸಂಘ ಜೀವಿಯಾಗಿ ಸಮಾಜದಲ್ಲಿ ನಾಗರಿಕತೆ ಅಳವಡಿಸಿಕೊಂಡರೆ ಕಾನೂನಿನ ಅರಿವು ಮತ್ತು ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತವೆ. ಇಂದಿನ ಆಧುನಿಕ ಪ್ರಪಂಚದಲ್ಲಿ ನಾಗರಿಕತೆ ಬೆಳದಂತೆ ಮನುಷ್ಯ ಸಂಬಂಧಗಳು ಸಡಿಲಗೊಳ್ಳುತ್ತಿವೆ ಎಂದು ವಿಷಾದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.