ತುಮಕೂರು

ಬಿಎಸ್‌ವೈ ಮರಳಿರುವುದು ಆನೆ ಬಲ ತಂದಿದೆ

Published On :

ತಿಪಟೂರು: ಹುಟ್ಟು ಹೋರಾಟಗಾರ ಹಾಗೂ ರೈತನಾಯಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬಿಜೆಪಿಗೆ ಮರಳಿ ಬಂದಿರುವುದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಜಿಲ್ಲಾ ಬಿಜೆಪಿ ಹಿರಿಯ ಮುಖಂಡ,  ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷರೂ ಆದ ಶಿವಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪನವರ ಅಧಿಕಾರವಧಿಯಲ್ಲಿ ನಡೆದಂತಹ ಜನಪ್ರಿಯ ಕಾರ್ಯಕ್ರಮಗಳಾದ ಭಾಗ್ಯಲಕ್ಷ್ಮಿ, ವೃದ್ಧಾಪ್ಯವೇತನ, ಸಣ್ಣ ಹಿಡುವಳಿದಾರರಿಗೆ ಸಬ್ಸಿಡಿ ಹಣ, ಹಾಲು ಉತ್ಪಾದಕರಿಗೆ ಲೀಟರ್‌ಗೆ 2ರು. ಸಹಾಯಧನ, ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ, ರೈತರ 25ಸಾವಿರ ರು.ಸಾಲ ಮನ್ನಾ ಸೇರಿದಂತೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಇನ್ನೂ ಅನೇಕ ಜನಪರ ಕಾರ್ಯಕ್ರಮಗಳು ಗ್ರಾಮಾಂತರ ಪ್ರದೇಶದ ರೈತರ ಮನದಲ್ಲಿ ಅಚ್ಚಳಿಯದಂತೆ ಉಳಿದಿವೆ.
ಲೋಕಸಭಾ ಚುನಾವಣೆಯಲ್ಲಿ ಈ ಅಭಿಮಾನವು ಮತಗಳಾಗಿ ಪರಿವರ್ತನೆಯಾಗಿ ಕನಿಷ್ಠ 22 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಯು ಜಯಭೇರಿ ಬಾರಿಸುವುದರಲ್ಲಿ ಅನುಮಾನವೇ ಇಲ್ಲ.
ತುಮಕೂರು ಜಿಲ್ಲೆಯಲ್ಲಿ ಕೆಜೆಪಿಯ ವಿಲೀನದಿಂದ ತುಮಕೂರು ಲೋಕಸಭಾ ಕ್ಷೇತ್ರವನ್ನು ಗೆಲ್ಲುವುದರಲ್ಲಿ ಯಶಸ್ವಿಯಾಗುತ್ತದೆ. ಯಡಿಯೂರಪ್ಪ ಮತ್ತು ಕೆಜೆಪಿ ಕಾರ್ಯಕರ್ತರನ್ನು ಬಿಜೆಪಿ ಕಾರ್ಯಕರ್ತರು ಹೃತ್ಪೂರ್ವಕವಾಗಿ ಸ್ವಾಗತಿಸಿದ್ದು, ತಾಲೂಕಿನ ಕೆಜೆಪಿ ಮತ್ತು ಬಿಜೆಪಿ ಕಾರ್ಯಕರ್ತರ ವಿಲೀನದಿಂದ ಮುಂದಿನ  ಎಲ್ಲಾ ಚುನಾವಣೆಗಳಲ್ಲಿಯೂ ಬಿಜೆಪಿ ಜಯಗಳಿಸುವುದರಲ್ಲಿ ಅನುಮಾನವೇ ಇಲ್ಲ ಎಂದು ಶಿವಸ್ವಾಮಿ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.