ಮಕ್ಕಳಿಗೆ ಆಸ್ತಿ ಮಾಡದೆ ಅವರನ್ನೇ ಆಸ್ತಿಯನ್ನಾಗಿ ಮಾಡಿ: ಶಾಸಕ ಷಡಕ್ಷರಿ
ತಿಪಟೂರು: ಮಕ್ಕಳನ್ನು ತಪ್ಪದೇ ಕಡ್ಡಾಯವಾಗಿ ಶಾಲೆಗೆ ಕಳುಹಿಸುವ ಜವಾಬ್ದಾರಿ ಪೋಷಕರದ್ದಾಗಿದ್ದು, ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರಿಗೆ ಆಸ್ತಿ ಮಾಡದೆ ಅವರನ್ನೇ ಆಸ್ತಿಯನ್ನಾಗಿ ಮಾಡಬೇಕೆಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ತಾಲೂಕಿನ ಹೆಡಗರಹಳ್ಳಿ-ಬೆಳಗರಹಳ್ಳಿಯ ಡಾ. ಅಂಬೇಡ್ಕರ್ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಉಚಿತ ಸೈಕಲ್ ವಿತರಣಾ ಸಮಾರಂಭದಲ್ಲಿ ಸೈಕಲ್ ವಿತರಿಸಿ ಮಾತನಾಡಿದ ಅವರು ಸರ್ಕಾರವು ಶಿಕ್ಷಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಮುಖ್ಯ ಉದ್ದೇಶ ಎಲ್ಲರಿಗೂ ಶಿಕ್ಷಣ ಸಿಗಬೇಕೆಂಬುದು.
ಈ ನಿಟ್ಟಿನಲ್ಲಿ ಶಿಕ್ಷಕರು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಪುನಃ ಶಾಲೆಗೆ ಕರೆತರಬೇಕು. ಬಿಸಿಯೂಟ ಮತ್ತು ಹಾಲು ವಿತರಣಾ ಯೋಜನೆಯು ಮಕ್ಕಳ ಪೌಷ್ಠಿಕತೆಯನ್ನು ಹೆಚ್ಚಿಸುವ ಸಲುವಾಗಿ ಜಾರಿಗೆ ತಂದಿದ್ದು, ಸ್ವಚ್ಛತೆ ಮತ್ತು ನೈರ್ಮಲ್ಯತೆ ಕಾಪಾಡುವ ಮೂಲಕ ಸಮಯಕ್ಕೆ ಸರಿಯಾಗಿ ಇವುಗಳನ್ನು ನೀಡಬೇಕೆಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ.ಪ್ರಭುಸ್ವಾಮಿ ಮಾತನಾಡಿ ಸರ್ಕಾರಿ ಶಾಲೆಗಳು ಉತ್ತಮ ಮಟ್ಟದ ಶಿಕ್ಷಣ ನೀಡುತ್ತಿದ್ದು, ಪೋಷಕರು ಖಾಸಗಿ ಶಾಲೆಯ ವ್ಯಾಮೋಹಕ್ಕೆ ಸಿಲುಕದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ. ಇದರಿಂದ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆಯಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಎಸ್.ಪಿ. ಎಸ್ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಭದ್ರಪ್ಪ, ಜಿ.ಪಂ.ಸದಸ್ಯೆ ರಾಧನಾರಾಯಣಗೌಡ, ಗ್ರಾ.ಪಂ.ಅಧ್ಯಕ್ಷ ಗಂಗಾಧರಯ್ಯ, ತಾ.ಪಂ.ಸದಸ್ಯ ರವಿ, ಗ್ರಾ.ಪಂ. ಸದಸ್ಯರಾದ ದಯಾನಂದ್, ಜಯಮಾಲ, ಸತೀಶ್, ರಾಜಣ್ಣ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಮಹದೇವಯ್ಯ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸುಷ್ಮಾ ಪ್ರಾರ್ಥಿಸಿ, ಮುಖ್ಯ ಶಿಕ್ಷಕ ಜೆ.ಜಿ.ಶಿವಪ್ಪ ಸ್ವಾಗತಿಸಿ, ಸಹ ಶಿಕ್ಷಕ ಎಸ್.ಆರ್.ಸ್ವಾಮಿ ನಿರೂಪಿಸಿ, ದೈಹಿಕ ಶಿಕ್ಷಕ ಆರ್.ಎಂ. ಶಂಕರಮೂರ್ತಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

