ಕಾಲು ಜಾರಿ ನದಿಗೆ ಬಿದ್ದು ಇಬ್ಬರ ಸಾವು
ಶ್ರೀರಂಗಪಟ್ಟಣ/ ಗುಬ್ಬಿ: ಕಾವೇರಿ ನದಿಯಲ್ಲಿ ಕಾಲು ಜಾರಿ ಬಿದ್ದು ಶಿಕ್ಷಕ ಮತ್ತು ವಿದ್ಯಾರ್ಥಿನಿ ನೀರು ಪಾಲಾಗಿರುವ ಘಟನೆ ತಾಲೂಕಿನ ದೊಡ್ಡಪಾಳ್ಯ ಗ್ರಾಮದ ಬಳಿ ನಡೆದಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಲೆಕ್ಕೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ನರಸಿಂಹಯ್ಯ (45) ಮತ್ತು ಆರನೇ ತರಗತಿ ವಿದ್ಯಾರ್ಥಿನಿ ವರಮಹಾಲಕ್ಷ್ಮೀ(11) ಸಾವನ್ನಪ್ಪಿದವರು. ಲೆಕ್ಕೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 50 ಮಂದಿ ವಿದ್ಯಾರ್ಥಿಗಳು ಮೈಸೂರು ಮತ್ತು ಶ್ರೀರಂಗಪಟ್ಟಣದಲ್ಲಿ ಪ್ರವಾಸಕ್ಕೆ ಆಗಮಿಸಿದ್ದರು. ಮಳವಳ್ಳಿಯಲ್ಲಿ ಶಿವನಸಮುದ್ರ ನೋಡಿಕೊಂಡು ತಲಕಾಡು, ಸೋಮನಾಥಪುರ ಪ್ರವಾಸ ಮುಗಿಸಿ ಬನ್ನೂರು-ಕರಿಘಟ್ಟ ರಸ್ತೆ ಮಾರ್ಗವಾಗಿ ಶ್ರೀರಂಗಪಟ್ಟಣಕ್ಕೆ ತೆರಳುತ್ತಿದ್ದಾರೆ.
ಮಾರ್ಗಮಧ್ಯೆ ದೊಡ್ಡಪಾಳ್ಯ ಗ್ರಾಮದ ಬಳಿ ವಿದ್ಯಾರ್ಥಿಗಳಿದ್ದ ಬಸ್ ಬಂದಾಗ ವಿದ್ಯಾರ್ಥಿನಿ ವರಮಹಾಲಕ್ಷ್ಮೀ ಬಹಿರ್ದೆಸೆಗೆ ಇಳಿದಿದ್ದಾಳೆ. ಆನಂತರ ಪಕ್ಕದಲ್ಲಿಯೇ ಹರಿಯುತ್ತಿದ್ದ ಕಾವೇರಿ ನದಿಗೆ ಇಳಿದಾಗ ವರಮಹಾಲಕ್ಷ್ಮೀ ಕಾಲು ಜಾರಿದ್ದಾಳೆ. ಇದನ್ನು ಕಂಡ ಶಿಕ್ಷಕ ನರಸಿಂಹಯ್ಯ ನದಿಗೆ ಇಳಿದಾಗ ನೀರಿನ ರಭಸಕ್ಕೆ ಮುಳುಗಿ ಹೋಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದರು. ಈ ಸಂಬಂಧ ಅರಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

