ತುಮಕೂರು

ಮಹಾನ್ ಚೇತನ ವಿವೇಕಾನಂದ: ನರೇಂದ್ರಬಾಬು

Published On :

ಹುಳಿಯಾರು: ಭಾರತೀಯರಲ್ಲಿ ತೇಜಸ್ಸು ಮೂಡಿಸಿದ ಮಹಾನ್ ಚೇತನ ಸ್ವಾಮಿ ವಿವೇಕಾನಂದರು. ಅವರ ತತ್ವಾದರ್ಶಗಳನ್ನು ಇಂದಿನ ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೆಕೊಳ್ಳುವ ಮೂಲಕ ಸಾಧನೆ ಮೆಟ್ಟಿಲನ್ನೇರಬೇಕು ಎಂದು ಹೋಬಳಿ ಅಖಿಲಭಾರತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ನರೇಂದ್ರಬಾಬು ತಿಳಿಸಿದರು.
ಪಟ್ಟಣದ ಗಣಪತಿ ದೇವಾಲಯದಲ್ಲಿ  ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಹೋಬಳಿ ಘಟಕ ಹಾಗೂ ದೇವಾಲಯ ಸಮಿತಿವತಿಯಿಂದ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿಯಲ್ಲಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಮಕ್ಕಳಿಗೆ ವಿವೇಕಾನಂದರ ಭಾವಚಿತ್ರ ವಿತರಿಸಿ ಅವರು ಮಾತನಾಡಿದರು.
ಯುವಕರೇ ದೇಶದ ಆಸ್ತಿಯಾಗಿದ್ದು, ಯುವಪೀಳಿಗೆ ಮನಸ್ಸು ಮಾಡಿದರೆ ಎಂತಹ ಕ್ಲಿಷ್ಟಕಾರ್ಯವನ್ನು ಸುಲಭವಾಗಿ ಮಾಡಬಲ್ಲರು ಎಂದರು.
ದೇವಾಲಯ ಸಮಿತಿ ಕಾರ್ಯದರ್ಶಿ ಸುದರ್ಶನಾಚಾರ್ ಮಾತನಾಡಿ, ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ಹೇಳುವ ಮೂಲಕ ವಿದ್ಯಾರ್ಥಿಗಳಲ್ಲಿ ನವ ಚೈತನ್ಯವನ್ನು ತುಂಬಿರುವ ವಿವೇಕಾನಂದರು ನಮ್ಮೆಲ್ಲರ ಪಾಲಿನ ಆಶಾಕಿರಣದಂತೆ ಎಂದರು. ನಾಗರಾಜು, ಪ್ರಸನ್ನಕುಮಾರ್, ಚಿದಾನಂದ್, ಶಿಕ್ಷಕರಾದ ಕುಮಾರ್, ಗಿರೀಶ್ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.