ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ, ಕ್ರೀಡೆ ಅತ್ಯಂತ ಪ್ರಮುಖ
ತುಮಕೂರು: ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣ ಮತ್ತು ಕ್ರೀಡಾ ಚಟುವಟಿಕೆಗಳು ಅತ್ಯಂತ ಪ್ರಮುಖವಾದ ಪಾತ್ರವನ್ನು ವಹಿಸುತ್ತವೆ ಎಂದು ಮಾಜಿ ಕ್ರಿಕೆಟ್ ಪಟು ಸುನೀಲ್ ಜೋಷಿ ಅಭಿಪ್ರಾಯಪಟ್ಟರು.
ತಾಲೂಕಿನ ಗೂಳೂರು ಸಮೀಪವಿರುವ ವರೀನ್ ಇಂಟರ್ ನ್ಯಾಷನಲ್ ವಸತಿ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶ್ರದ್ಧೆ, ಭಕ್ತಿ, ಶಿಸ್ತು ಹಾಗೂ ಸಂಯಮವನ್ನು ಅಳವಡಿಸಿಕೊಳ್ಳಬೇಕು. ಜೀವನದಲ್ಲಿ ಸಿಹಿ ಮತ್ತು ಕಹಿ ಅನುಭಗಳನ್ನು ಮೊದಲ ಹಂತದಲ್ಲಿ ಎದುರಿಸಿದರೆ ಜೀವನ ಪರಿಪೂರ್ಣವಾಗಿರುತ್ತದೆ ಎಂದು ತಿಳಿಸಿದರು.
ವಿರಾಟ್ ಟ್ರಸ್ಟ್ನ ಕಾರ್ಯದರ್ಶಿ ಎಚ್.ಕೆ. ಮಮತಾ ಸುರೇಶ್ ಮಾತನಾಡಿ, ಬದಲಾಗುತ್ತಿರುವ ಕಾಲಘಟ್ಟದಲ್ಲಿ ನಾವುಗಳು ಬದಲಾಗಿ ಉತ್ತಮ ಶಿಕ್ಷಣದ ಕಡೆ ಗಮನ ಹರಿಸಬೇಕು. ಕ್ರೀಡಾ ಮನೋಭಾವ ಮತ್ತು ವಿವಿಧ ಚಟುವಟಿಕೆಗಳಲ್ಲಿ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ವಿದ್ಯೆ ಎಂದರೆ ಕೇವಲ ತಲೆಯಲ್ಲಿ ಬುದ್ಧಿ ತುಂಬಿಕೊಳ್ಳುವುದಲ್ಲ. ಎಲ್ಲರೂ ವಿದ್ಯೆಯನ್ನು ವ್ಯವಸ್ಥಿತ ಹಾಗೂ ಕ್ರಮಬದ್ಧವಾಗಿ ಉಪಯೋಗಿಸಿಕೊಂಡರೆ ಮಾತ್ರ ವಿದ್ಯೆಗೆ ಗೌರವವನ್ನು ಸಲ್ಲಿಸಿದಂತಾಗುತ್ತದೆ ಎಂದು ತಿಳಿಸಿದರು.
ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿರಾಟ್ ಟ್ರಸ್ಟ್ನ ಅಧ್ಯಕ್ಷ ಕೃಷ್ಣಯ್ಯ, ಉಪಾಧ್ಯಕ್ಷ ಆರ್. ಅನ್ನದಾನಯ್ಯ, ನರೇಂದ್ರಕುಮಾರ್, ಟ್ರಸ್ಟ್ನ ಕಾರ್ಯದರ್ಶಿ ಹೇಮರಾಜ್ ಸೆಂಚ್ ಹಾಗೂ ಟ್ರಸ್ಟಿ ಅಮ್ಮಾಜಮ್ಮ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

