ತುಮಕೂರು

ವಿದ್ಯಾರ್ಥಿಗಳೇ ಪರೀಕ್ಷೆಗೆ ಸಿದ್ಧರಾಗಿ, ಪ್ರಗತಿ ಪಥದತ್ತ ಸಾಗಿ

Published On :

ಗುಬ್ಬಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಉತ್ತಮ ಪಡಿಸಲು ಸರ್ಕಾರ ಹಲವಾರು ಮಹತ್ವ ಪೂರ್ಣ ಯೋಜನೆಗಳನ್ನು ಜಾರಿಗೊಳಿಸಿದ್ದು ವಿದ್ಯಾರ್ಥಿಗಳು ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರಗತಿ ಪಥದತ್ತ ಸಾಗುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ. ಬಸವರಾಜು ಕರೆ ನೀಡಿದರು.
ಪಟ್ಟಣದ  ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳ ಸಹಯೋಗದೊಂದಿಗೆ ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಕ್ಕಳೇ ಪರೀಕ್ಷೆಗೆ ಸಿದ್ಧರಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಲ್ಲಿ ಪರೀಕ್ಷೆ ಭಯ ದೂರ ಮಾಡುವ ಹಾಗೂ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆಯುವ ಸದುದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ವಿಶೇಷ ತರಗತಿ: ಈಗಾಗಲೇ ಶಾಲಾ ಹಂತದಲ್ಲಿ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ವಿಶೇಷ ತರಗತಿಗಳು ಹಾಗೂ ಪರೀಕ್ಷೆಯಲ್ಲಿ ಅನುಸರಿಸಬೇಕಾದ ನಿಯಮಗಳಬಗ್ಗೆ ಸಮಗ್ರವಾದ ಮಾಹಿತಿಗಳನ್ನು ನೀಡಲಾಗುತ್ತಿದ್ದು ಮಕ್ಕಳು ಮುಂಬರುವ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆಯುವಂತೆ ತಿಳಿಸಿದರು.
ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಆರ್. ಹೊನ್ನೇಶಪ್ಪ ಮಾತನಾಡಿ ಇಂದಿನ ಮಕ್ಕಳಿಗೆ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಶೈಕ್ಷಣಿಕ ವಿಕಾಕ್ಕೆ ಪೂರಕವಾದ ಕಾರ್ಯಕ್ರಮಗಳ ಅವಶ್ಯಕತೆ ಇದ್ದು ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಮಕ್ಕಳೇ ಪರೀಕ್ಷೆಗೆ ಸಿದ್ಧರಾಗಿ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಭಯದ ವಾತಾವರಣ ಮುಕ್ತ: ತಾಲೂಕಿನ ವಿವಿಧ ಪ್ರೌಢಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿರುವ ಕಲಿಕೆಯಲ್ಲಿ ಹಿಂದುಳಿದವರಿಗೆ ಅನುಕೂಲ ಮಾಡಲು ಆಯ್ದ ವಿದ್ಯಾರ್ಥಿಗಳಿಗೆ ಸರಳ ರೀತಿಯಲ್ಲಿ ಪರೀಕ್ಷೆ ಬರೆಯಲು, ಭಯದ ವಾತಾವರಣದಿಂದ ಮುಕ್ತಗೊಳಿಸಲು ಕೌಶಲ್ಯಗಳನ್ನು ಹೆಚ್ಚಿಸಿ ಆತ್ಮವಿಶ್ವಾಸ, ಆತ್ಮ ಸ್ಥೈರ್ಯ ಮೂಡಿಸುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಲ್ಲಿ ಇಂಗ್ಲಿಷ್, ಗಣಿತ, ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಉತ್ತಮವಾಗಿ ಬೋಧಿಸುವ ಶಿಕ್ಷಕರನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಗುರುತಿಸಿದ್ದು ಸಿ.ವಿ.ಎನ್.ಮೂರ್ತಿ, ಗಿರೀಶ್‌ಕುಮಾರ್, ಪಿ.ಎಸ್. ಮಲ್ಲಿಕಾರ್ಜುನ, ಎಂ.ಜೆ. ವಿಶ್ವನಾಥ್, ಎನ್. ಮಂಜುನಾಥ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ. ಕರಿಯಪ್ಪ, ಮುಖ್ಯೋಪಾಧ್ಯಾಯ ಗಂಗಾಧರ್, ಮೇಲ್ವಿಚಾರಕಿ ಸಿ.ಶಿವಮ್ಮ ಸೇರಿದಂತೆ ವಿವಿಧ ಶಾಲೆಗಳಿಂದ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.