'ಕ್ಯಾಲೆಂಡರ್ ಬಿಡುಗಡೆ ಜವಾಬ್ದಾರಿ ಮಹತ್ವದ್ದು'
ತುಮಕೂರು: ಕ್ಯಾಲೆಂಡರ್ ಬಿಡುಗಡೆಯಂತ ಜವಾಬ್ದಾರಿ ಕೆಲಸ ಸಂಘಗಳಿಗೆ ಅತ್ಯಂತ ಮಹತ್ವದ್ದು. ಕಾಲದ ಜೊತೆ ನಮ್ಮ ಸಂಘಟನಾ ಕೆಲಸ ಸಂಯೋಜಿಸಬೇಕಾದ ಹೆಚ್ಚಿನ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಆದ್ದರಿಂದ ಎಲ್ಲಾ ಸಂಘಟನೆಗಳು ಈ ಮಾದರಿಯಲ್ಲಿ ಮುನ್ನಡೆಯಬೇಕು ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ತಿಳಿಸಿದ್ದಾರೆ.
ತುಮಕೂರು ನಗರದ ಚಿಕ್ಕಪೇಟೆ ಅಗ್ರಹಾರದಲ್ಲಿರುವ ಶ್ರೀ ಕೋಟೆ ಕೊಲ್ಲಾಪುರದಮ್ಮ ಸಮುದಾಯ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಫೆಡರೇಷನ್ ಕಾರ್ಯಕ್ರಮದಲ್ಲಿ ಕ್ಯಾಲೆಂಡರ್ ಬಿಡುಗಡೆ ನೆರವೇರಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಅಧ್ಯಕ್ಷ ಬಿ. ಉಮೇಶ್ ಸಂಘಟನೆಗಳು ಇಂದು ಐಕ್ಯ ಹೋರಾಟವನ್ನು ನಡೆಸಬೇಕಾಗಿದೆ ಎಂದರು. ಅಧಿಕಾರಕ್ಕೆ ಬರುವ ಸರ್ಕಾರಗಳು ತಮ್ಮ ಸ್ವ-ಹಿತಾಸಕ್ಷಿಯ ಮೇಲೆ ನಡೆಯುತ್ತಿದ್ದು ದುಡಿಯುವ ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗುತ್ತಿಲ್ಲ. ಭಾವನಾತ್ಮಕ ಹಾಗೂ ತಾತ್ಕಾಲಿಕ ಯೋಜನೆಗಳನ್ನು ರೂಪಿಸಿ ಜನರ ಐಕ್ಯತೆಯನ್ನು ಹೊಡೆಯುತ್ತಿದ್ದಾರೆ ಎಂದರು.
ಆದ್ದರಿಂದಲೇ ಎಲ್ಲಾ ಜನ ವಿಭಾಗಗಳು ಒಂದಲ್ಲ ಒಂದ ಸಮಸ್ಯೆಗೆ ಪ್ರತಿನಿತ್ಯ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇಂತಹ ಹೋರಾಟಗಳು ಬಲಿಷ್ಠ ಮತ್ತು ಐಕ್ಯತೆಯೊಂದಿಗೆ ನಡೆದರೆ ಮಾತ್ರ ಸರ್ಕಾರಗಳ ಜನ ವಿರೋಧಿ ನೀತಿಗಳನ್ನು ಬದಲಿಸುವಲ್ಲಿ ಯಶಸ್ವಿಯನ್ನು ಕಾಣಬಹುದೆಂದರು.
ವೇದಿಕೆಯಲ್ಲಿ ಫೆಡರೇಷನ್ನ ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಹ್ಮಣ್ಯ, ಜಿಲ್ಲಾ ಖಜಾಂಚಿ ಗೋವಿಂದರಾಜು, ರಾಜ್ಯ ಉಪಾಧ್ಯಕ್ಷ ಶ್ರೀಧರ್, ರಾಜ್ಯ ಸಮಿತಿ ಸದಸ್ಯ ಮಲ್ಲೇಶಪ್ಪ, ಗೌರವ ಅಧ್ಯಕ್ಷ ಗೋವಿಂದರಾಜು, ಅಂಗನವಾಡಿ ನೌಕರ ಸಂಘಟನೆಯ ಜಿಲ್ಲಾ ಮುಖಂಡ ಕಮಲ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

