ಗುಣಮಟ್ಟದ ಶಿಕ್ಷಣಕ್ಕಾಗಿ ಶಾಲೆಗಳಲ್ಲಿ ಕಲಿಕೋತ್ಸವ
ಪಾವಗಡ: ವಿದ್ಯಾರ್ಥಿಗಳಿಗೆ ಗುಣಮಟ್ಟ ಶಿಕ್ಷಣ ಕಲ್ಪಿಸುವ ಹಿನ್ನಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಕಲಿಕೋತ್ಸವ ರೂಪಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಪಿ. ನಾಗರಾಜ್ ಹೇಳಿದರು.
ಅವರು ಕ್ಷೇತ್ರ ಸಂಪನ್ಮೂಲ ಕೇಂದ್ರ ವತಿಯಿಂದ ಮಂಗಳವಾರ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ 2013-14ನೇ ಸಾಲಿನ ಕಲಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಕ್ಷರ ದಾಸೋಹ, ಕ್ಷೀರ ಭಾಗ್ಯ, ಆರೋಗ್ಯ ಭಾಗ್ಯ ಸೇರಿದಂತೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತ್ರಿವಿಧ ಸೌಲಭ್ಯಗಳಿದ್ದು ಜೊತೆಗೆ ಉತ್ತಮ ಶಿಕ್ಷಕ ಸಮೂಹವಿದೆ ಎಂದರು. ಸರ್ಕಾರಿ ಶಾಲೆಗಳ ಪ್ರೋತ್ಸಾಹ, ಗುಣಮಟ್ಟದ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಉತ್ತಮ ಭವಿಷ್ಯದ ಹಿನ್ನೆಲೆಯಲ್ಲಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿಯೇ ವ್ಯಾಸಂಗ ಮಾಡಿಸಿ ಎಂದು ಪೋಷಕರಿಗೆ ಅವರು ಕರೆ ನೀಡಿದರು.
ಕಲಿಕೋತ್ಸವ ನೋಡಲ್ ಅಧಿಕಾರಿ ಆರ್.ಎಂ. ನರಸಿಂಹ ಮಾತನಾಡಿ ಸರ್ಕಾರ ಕಲಿಕೋತ್ಸವ ಎಂಬ ಹೊಸ ಕಾರ್ಯಕ್ರಮ ಜಾರಿಗೆ ತಂದಿದ್ದು ಸರ್ಕಾರಿ ಶಾಲೆಗಳ ಬಗ್ಗೆ ಹೊಂದಿರುವ ಅಭಿಪ್ರಾಯವನ್ನು ಧನಾತ್ಮಕಗೊಳಿಸಲು ಮತ್ತು ಪೋಷಕರು ತಮ್ಮ ಮಕ್ಕಳ ಕಲಿಕೆ ಬಗ್ಗೆ ಖಾತರಿ ಪಡಿಸಿಕೊಳ್ಳುಲು ಇದು ಉತ್ತಮ ಕಾರ್ಯಕ್ರಮವೆಂದರು. ಬಿಆರ್ಸಿ ಕೆ.ಆರ್.ಮಧುಸೂಧನ್ ಕಲಿಕೋತ್ಸವದ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಸ್ವರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಬಿಆರ್ಪಿ ನಟರಾಜ್ ಸ್ವಾಗತಿಸಿ ಸಿಆರ್ಪಿ ಗೋವಿಂದಪ್ಪ ನಿರೂಪಿಸಿದರು. ಬಿಆರ್ಪಿ ಪಿ. ಹರೀಶ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

