ತುಮಕೂರು

ಲೋಕ ಕಲ್ಯಾಣಾರ್ಥ ಬೃಹತ್ ಜಾತ್ರಾ ಮಹೋತ್ಸವ

Published On :

ಶಿರಾ: ಶ್ರೀ ಕ್ಷೇತ್ರ ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದಲ್ಲಿ ಶ್ರೀಮಠದ ಪೀಠಾಧ್ಯಕ್ಷರಾದ  ನಂಜಾವಧೂತ ಸ್ವಾಮಿಗಳ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ ಬೃಹತ್ ಜಾತ್ರಾ  ಮಹೋತ್ಸವವನ್ನು ಜ. 16 ರಿಂದ ಹಮ್ಮಿಕೊಳ್ಳಲಾಗಿದೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಶ್ರೀಮಠ ಜ. 16 ರಂದು ಗಂಗಾ ಪೂಜೆ, 17 ರಂದು ವಿಘ್ನೇಶ್ವರ ಉತ್ಸವ, 18 ರಂದು ಹೂವಿನ ತೇರು, 19 ರಂದು ಕೈಲಾಸೋತ್ಸವ 20 ರಂದು ನಂದೀಶ್ವರ ಉತ್ಸವ, 21 ರಂದು ಮಡಿತೇರು, 22 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಓಂಕಾರೇಶ್ವರ ಸ್ವಾಮಿ, ಪಾರ್ವತಿ ಕಲ್ಯಾಣೋತ್ಸವ. ಸಂಜೆ 6 ಗಂಟೆಗೆ 13ನೇ ವರ್ಷದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟನಾ ಸಮಾರಂಭ ಏರ್ಪಡಿಸಿದ್ದು, ಅಂದು ತಡರಾತ್ರಿ 11 ಗಂಟೆಗೆ ಐತಿಹಾಸಿಕ ಶ್ರೀ ಓಂಕಾರೇಶ್ವರ ಸ್ವಾಮಿ ಕಲ್ಲುಗಾಲಿ ರಥೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠ ತಿಳಿಸಿದೆ.
ವಿಶೇಷ ಕಾರ್ಯಕ್ರಮ: ಜ. 23 ರಿಂದ 28 ರವರೆಗೆ ಪ್ರತಿ ದಿನ ಮಧ್ಯಾಹ್ನ ವಿವಿಧ ಇಲಾಖೆಗಳಿಂದ ರೈತ ವರ್ಗದವರಿಗೆ ವಿವಿಧ ವಿಚಾರಗಳ ಕಾರ್ಯಾಗಾರ ಏರ್ಪಡಿಸಿದ್ದು, ಪ್ರತಿ ಸಂಜೆ ವಿವಿಧ ರೀತಿಯ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತವೆ ಎಂದು ಶ್ರೀಮಠ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.