ತುಮಕೂರು

ಹುಳಿಯಾರು: ಸಡಗರದ ಆಚರಣೆ

Published On :

ಹುಳಿಯಾರು: ಗ್ರಾಮೀಣ ಭಾಗದ ಜನತೆಗೆ ಸುಗ್ಗಿಯ ಹಬ್ಬವಾಗಿ ಆಚರಿಸುವ ಸಂಕ್ರಾತಿಯನ್ನು ಪಟ್ಟಣದ ಹಾಗೂ ಸುತ್ತಮುತ್ತಲಿನ ರೈತರು, ಸಾರ್ವಜನಿಕರು, ಮಕ್ಕಳು ಸೇರಿದಂತೆ ಎಲ್ಲರೂ ಸೇರಿ ಎಳ್ಳು ಬೆಲ್ಲವನ್ನು ಅಕ್ಕಪಕ್ಕದ ಮನೆಯವರಿಗೆ, ಸಂಬಂಧಿಗಳಿಗೆ ಬೀರುವ ಮೂಲಕ ಹಬ್ಬದ ಶುಭಾಶಯವನ್ನು ತಿಳಿಸುತ್ತಾ ಸಡಗರ ಸಂಭ್ರಮದಿಂದ ಆಚರಿಸಿದರು.
ಹಬ್ಬದ ಅಂಗವಾಗಿ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರಗಳನ್ನು ಮಾಡಲಾಗಿದ್ದು, ಮುಂಜಾನೆಯೇ ಪಟ್ಟಣದ ಈಶ್ವರ, ಆಂಜನೇಯ ಹಾಗೂ ಗ್ರಾಮದೇವತೆಗಳಾದ ದುರ್ಗಾಪರಮೇಶ್ವರಿ, ಹುಳಿಯಾರಮ್ಮ  ದೇವಾಲಯಗಳಿಗೆ ತೆರಳಿ ದೇವರಿಗೆ ಪೂಜೆಸಲ್ಲಿಸಿ ಎಳ್ಳುಬೆಲ್ಲ ಅರ್ಪಿಸಿ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಸಂಜೆ ಮಹಿಳೆಯರು, ಮಕ್ಕಳು ಹೊಸ ಉಡುಪನ್ನು ತೊಟ್ಟು  ಕೈಯ್ಯಲ್ಲಿ ಎಳ್ಳು, ಬೆಲ್ಲ ಹಾಗೂ ಕಬ್ಬನ್ನು  ಹಿಡಿದು ಮನೆಮನೆಗಳಿಗೆ ತೆರಳಿ ಎಳ್ಳುಬೆಲ್ಲ ಬೀರುತ್ತಾ ಒಬ್ಬರಿಗೊಬ್ಬರು ಶುಭಾಶಯ ಹಂಚಿಕೊಂಡು ಸಂಭ್ರಮಿಸಿದರು.
ಪಟ್ಟಣದ ಅಕ್ಕಪಕ್ಕದ ಹಳ್ಳಿಗಳಲ್ಲಿನ ರೈತರು ತಮ್ಮ ರಾಸುಗಳ ಮೈತೊಳೆದು, ಕೊಂಬುಗಳನ್ನು ಶುಭ್ರಗೊಳಿಸಿ ವಿಶೇಷ ಬಣ್ಣಗಳಿಂದ ಅಲಂಕರಿಸಿ,  ಪೂಜೆ ಮಾಡಿ ಅವುಗಳಿಗಾಗಿ ತಯಾರಿಸಿದ್ದ ಪ್ರಸಾದ ಹಾಗೂ ಕಬ್ಬು, ಬೆಲ್ಲ, ಬಾಳೆಹಣ್ಣು, ಮನೆಯಲ್ಲಿ ಮಾಡಿದ ವಿಶೇಷ ತಿನಿಸುಗಳನ್ನು ನೀಡಿ ಗೋಪೂಜೆ ಮಾಡಿ ಗ್ರಾಮದಲ್ಲಿನ ದೇವಾಲಯಗಳಿಗೆ ತೆರಳಿ ಪೂಜೆ ಮಾಡಿಸಿ, ಎಳ್ಳು ಬೆಲ್ಲ ಹಂಚುವ ಮೂಲಕ ಹಬ್ಬವನ್ನು ಸಡಗರದಿಂದ ಆಚರಿಸುತ್ತಿದ್ದುದು ಕಂಡು ಬಂತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.