ತುಮಕೂರು

ಪ್ರಾಚೀನ ದೇವಾಲಯ ಅಭಿವೃದ್ಧಿ ಅಗತ್ಯ

Published On :

ಕ.ಪ್ರ.ವಾರ್ತೆ , ಕುಣಿಗಲ್ , ಜ.16
ಅಳಿವಿನ ಅಂಚಿನಲ್ಲಿರುವ ಪ್ರಾಚೀನ ದೇವಾಲಯಗಳನ್ನು ಅಭಿವೃದ್ಧಿಗೊಳಿಸುವ ಮೂಲಕ ನಮ್ಮಸಂಸ್ಕೃತಿ, ಸಂಸ್ಕಾರಗಳನ್ನು ಮುಂದಿನ ಪೀಳಿಗೆಗೂ ಬಳುವಳಿಯಾಗಿ ನೀಡಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಗಂಗಾಧರ ರೈ ತಿಳಿಸಿದರು.
ತಾಲೂಕಿನ ಕಸಬಾಹೋಬಳಿಯ ಬೇಗೂರು ಗ್ರಾಮದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ, ಪ್ರಾಚೀನ ದೇವಾಲಯವಾದ ಹುಚ್ಚಮ್ಮ (ಲಕ್ಷ್ಮೀದೇವಿ) ದೇವಾಲಯಕ್ಕೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮೋತ್ಥಾನ ಯೋಜನೆಯಡಿಯಲ್ಲಿ 2 ರು. ಮೊತ್ತದ ಚೆಕ್ ವಿತರಿಸಿ ಮಾತನಾಡಿ, ನಮ್ಮ ನಾಡಿನ ದೇವಾಲಯಗಳು, ಈ ನಾಡು, ನುಡಿ, ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸಿ, ಬೆಳೆಸಿಕೊಂಡು ಬರುವುದರಲ್ಲಿ ಪ್ರಮುಖ ಪಾತ್ರ ವಹಿಸಿ, ಜನಮನದಲ್ಲಿ ಶಾಶ್ವತ ಸ್ಥಾನ ಪಡೆದಿವೆ. ರಾಜ್ಯ ಸೇರಿದಂತೆ ರಾಷ್ಟ್ರದ ಉದ್ದಗಲಕ್ಕೂ ಇರುವ ಹಲವು ಪ್ರಾಚೀನ ದೇವಾಲಯಗಳು, ಆಯಾ ಪ್ರಾಂತ್ಯದ ಗತವೈಭವ, ಸಂಸ್ಕೃತಿ, ಸಂಸ್ಕಾರಗಳನ್ನು  ಸಾರಿ ಹೇಳುವ ಸ್ಮಾರಕವಾಗಿವೆ ಎಂದರು.   
ಅವಿಭಾಜ್ಯ ಅಂಗ: ದೇವಾಲಯ ಸಮಿತಿ ಅಧ್ಯಕ್ಷ ಬಿ.ಎಂ. ಹುಚ್ಚೇಗೌಡ, ಗ್ರಾಮಾಂತರ ಪ್ರದೇಶದ ಜನತೆಯಲ್ಲಿ ದೇವರು, ಹಿರಿಯರ ಮೇಲೆ ಇಂದಿಗೂ ನಂಬಿಕೆ, ಗೌರವ ಉಳಿದುಕೊಂಡು ಬಂದಿರುವುದರಿಂದಲೇ ಗ್ರಾಮಗಳಲ್ಲಿ ಶಾಂತವಾವರಣ ನಿರ್ಮಾಣವಾಗಿದೆ. ಗ್ರಾಮಾಂತರ ಪ್ರದೇಶದ ಜನತೆ ಶ್ರಮಿಕರಾಗಿದ್ದು, ಮಾಡುವ ಕಾಯಕದ ಜೊತೆಯಲ್ಲಿ ಧಾರ್ಮಿಕ ನೆಲೆಗಟ್ಟಿನಲ್ಲಿ ಬದುಕುವ ಸಂಸ್ಕೃತಿ ರೂಢಿಸಿ ಕೊಂಡಿರುವುದರಿಂದ ಇಂದಿಗೂ ದೇವಾಲಯಗಳು ಗ್ರಾಮಾಂತರ ಪ್ರದೇಶದಲ್ಲಿ ಜನತೆಯ ಅವಿಭಾಜ್ಯ ಅಂಗವಾಗಿದೆ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೊಜನೆಯ ತಾಲೂಕು ಯೋಜನಾಧಿಕಾರಿ ಶಶಿರೇಖಾ, ಬೇಗೂರು ಗ್ರಾಪಂ ಅಧ್ಯಕ್ಷ ಬಿ.ಆರ್.ಮೂರ್ತಿ, ನಿವೃತ್ತ ಪ್ರಾಚಾರ್ಯ ಚಿಕ್ಕಕೆಂಪಯ್ಯ, ಪುರಸಭೆ ಮಾಜಿ ಉಪಾಧ್ಯಕ್ಷೆ ನಾಗರತ್ನಮ್ಮ, ಸದಸ್ಯ ಅರುಣಕುಮಾರ, ಗ್ರಾಪಂ ಮಾಜಿ ಅಧ್ಯಕ್ಷ ನಾಗಾನಂದ, ಪ್ರಮುಖರಾದ ಬಿ.ಕೆ.ರಾಮಣ್ಣ,ಬಿ.ಆರ್. ರಮೇಶ, ನಾಗರಾಜ (ಗುರು), ಗೋಪಾಲಯ್ಯ, ಹರೀಶ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.