ತುಮಕೂರು

ಶಿಕ್ಷಕರಿಗೆ ದೊರೆಯಬೇಕಾದ ಸೌಲಭ್ಯ ಕೊಡಿಸುತ್ತೇನೆ: ನಾರಾಯಣಸ್ವಾಮಿ

Published On :

ಶಿರಾ: ನಮ್ಮ ಜೀವನದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಂತದಲ್ಲಿ ಕಲಿಸಿದ ಗುರುಗಳನ್ನು ಹೆಚ್ಚು ನೆನಪಿಸಿಕೊಳ್ಳುತ್ತೇವೆ. ಆದ್ದರಿಂದ ಈ ಹಂತದಲ್ಲಿ ಉತ್ತಮ ಅಡಿಪಾಯ ಹಾಕುವುದರ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಲು ಸಹಕಾರಿಯಾಗಬೇಕು ಎಂದು ವಿಧಾನಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.
ಅವರು ಗಣಿತ ಶಿಕ್ಷಕರ ವೇದಿಕೆ ವತಿಯಿಂದ  ರಾಷ್ಟ್ರೀಯ ಗಣಿತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಿಸಿಇ ಆಧಾರಿತ ಘಟಕ ಯೋಜನೆ ಬಿಡುಗಡೆ ಹಾಗೂ ಗಣಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರ ಸಮಸ್ಯೆಗಳಿಗೆ ಅಹರ್ನಿಶಿ ದುಡಿಯುತ್ತಿದ್ದೇನೆ. ಸದನದಲ್ಲಿ ಅತಿ ಹೆಚ್ಚು ಪ್ರಶ್ನೆ ಕೇಳಿದ್ದೇನೆ. ಮುಂದೆಯೂ ಇದೇ ರೀತಿ ಶ್ರಮಿಸಿ, ಶಿಕ್ಷಕರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಕೊಡಿಸುತ್ತೇನೆ ಎಂದರು.
ಶಿಕ್ಷಣ ತಜ್ಞ, ಮನೋಶಾಸ್ತ್ರಜ್ಞ ಡಾ.ಪುಷ್ಪರಾಜ್ ಶಿಕ್ಷಕರನ್ನುದ್ದೇಶಿಸಿ ಮಾತನಾಡಿ, ಮಕ್ಕಳು ಸಂತಸದಿಂದ
ಗಣಿತ ಕಲಿಯಬೇಕು. ಮಕ್ಕಳ ಮನಸ್ಸನ್ನು ಅರ್ಥಮಾಡಿಕೊಂಡು ಬೋಧನೆ ಕೈಗೊಳ್ಳುವ ಮೂಲಕ ಗಣಿತದಲ್ಲಿ ಎಲ್ಲಾ ಸಮಸ್ಯೆಗಳನ್ನು ಬಿಡಿಸುವ ಸರಳ ಮಾರ್ಗವನ್ನು ತೋರಿಸಬೇಕು ಎಂದರು.
ಸಮಾರಂಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಟಿ.ಎಸ್. ಆಂಜನಪ್ಪ, ಡಯಟ್ ಪ್ರಾಂಶುಪಾಲ ಗೋಪಾಲಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ರಾಜಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜಣ್ಣ, ವಿಷಯ ಪರಿವೀಕ್ಷಕರಾದ ಬಿ.ಎಚ್.ಹನುಮಂತಪ್ಪ, ವೇದಮೂರ್ತಿ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವೆಂಕಟರಾಮು, ತಾಲೂಕು ಅಧ್ಯಕ್ಷ ನಾಗಭೂಷಣ, ಬಾಲಕಿಯರ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪಿ.ಮಂಜಪ್ಪ ಇತರರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಸಿಸಿಇ ಆಧಾರಿತ ಪಾಠಯೋಜನೆ, ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.