'ಹೆಣ್ಣು ಭ್ರೂಣಹತ್ಯೆ ಗಂಭೀರ ಅಪರಾಧ'
ಚಿಕ್ಕನಾಯಕನಹಳ್ಳಿ: ಭ್ರೂಣಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಗಂಭೀರ ಅಪರಾಧ ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಕೆ.ಸಿ. ವಿಶ್ವನಾಥ್ ನುಡಿದರು.
ಅವರು ಗುರುವಾರ ಪಟ್ಟಣದ ಶಿಶು ಅಭಿವೃದ್ಧಿ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಏರ್ಪಡಿಸಿದ್ದ ಜಾಗೃತಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಸರ್ಕಾರ ಮತ್ತು ನ್ಯಾಯಾಂಗ ಇಲಾಖೆ ಸೇರಿ ಕಾನೂನು ಕೇಂದ್ರಗಳನ್ನು ತೆರೆದಿದ್ದು, ಇವು 10ಸಾವಿರ ಜನರಿಗೆ ಒಂದರಂತೆ ಕಾರ್ಯನಿರ್ವಹಿಸುತ್ತವೆ.ಇಲ್ಲಿ ಪ್ರಕರಣದ ಕೂಲಂಕಷ ಪರಿಶೀಲನೆ ಮಾಡಿ ಸಾಧ್ಯವಾದಷ್ಟು ಅರಿವು ಮೂಡಿಸುವ ಬಗ್ಗೆ ಪ್ರಯತ್ನಿಸಲಾಗುವುದು ಎಂದರು. ವಕೀಲರ ಸಂಘದ ಕಾರ್ಯದರ್ಶಿ ವೈ.ಜಿ.ಲೋಕೇಶ್ ಮಾತನಾಡಿ ಗ್ರಾಮೀಣ ಭಾಗದಲ್ಲಿ ಮಹಿಳಾ ಜಾಗೃತಿ ಮೂಡಿಸಲು ಅಂಗನವಾಡಿ ಮತ್ತು ಸ್ತ್ರೀಶಕ್ತಿ ಸಂಘಗಳ ಮೂಲಕ ಕ್ರಮಕೈಗೊಳ್ಳಲಾಗಿದೆ. ಮಹಿಳೆಯರಲ್ಲಿ ಜಾಗೃತಿ ಮೂಡಿದಂತೆ ಭ್ರೂಣ ಹತ್ಯೆ ಮತ್ತು ವರದಕ್ಷಿಣೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಎಂದರು. ಅಧ್ಯಕ್ಷತೆಯನ್ನು ಶಿಶು ಅಭಿವೃದ್ಧಿ ಅಧಿಕಾರಿ ಅನೀಸ್ ಖೈಸರ್ ವಹಿಸಿದ್ದರು. ಸಮಾರಂಭದಲ್ಲಿ ಹಿರಿಯ ವಕೀಲರಾದ ಎಂ. ಮಹಲಿಂಗಪ್ಪ, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಪರಮೇಶ್ವರಪ್ಪ, ಲೀಗಲ್ ಏಡ್ ಕ್ಲಿನಿಕ್ ಸದಸ್ಯ ಹಬೀಬುಲ್ಲಾ, ಚಿಕ್ಕಣ್ಣ ಮುಂತಾದವರಿದ್ದರು. ಮಹದೇವಮ್ಮ ಪ್ರಾರ್ಥಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

