ರಂಗ ಕಲೆ ಉಳಿಸಲು ಯುವಕರಿಗೆ ಕರೆ
ಗುಬ್ಬಿ: ಆಧುನೀಕತೆ ಬೆಳೆದಂತೆ ನಮ್ಮ ಸಾಮಾಜಿಕ ಬದುಕಿನಲ್ಲಿ ಹೊಸ ಆಯಾಮ ನೀಡುವಂಥ ರಂಗ ಕಲೆಗಳು ಮರೆಯಾಗುತ್ತಿದ್ದು ಅವುಗಳನ್ನು ಉಳಿಸಿ ಬೆಳೆಸುವತ್ತ ಯುವಜನಾಂಗ ಮುಂದಾಗಬೇಕೆಂದು ಪಪಂ ಅಧ್ಯಕ್ಷ ಜಿ.ಡಿ.ಸುರೇಶ್ಗೌಡ ಕರೆ ನೀಡಿದರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಂಗ ನಾಟಕಗಳು ನಮ್ಮ ಸಂಸ್ಕೃತಿ ಪರಂಪರೆಗಳನ್ನು ಪ್ರಗತಿ ಪಥದತ್ತ ಕೊಂಡೊಯ್ಯತ್ತವೆ. ಇಂಥ ಮಹತ್ವದ ಕಲೆಗಳನ್ನು ಶಾಶ್ವತವಾಗಿ ಉಳಿಸಿ ಬೆಳೆಸುವತ್ತ ಕಲಾವಿಸರು ಚಿಂತನೆ ನಡೆಸಬೇಕಿದೆ ಎಂದರು.
ಪ್ರಾಚಾರ್ಯ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ, ಕೇವಲ ಮನೋರಂಜನೆಗಾಗಿ ರಂಗನಾಟಕಗಳನ್ನು ಅಭಿನಯಿಸುತ್ತಿರಲಿಲ್ಲ. ರಂಗನಾಟಕಗಳು ನಮ್ಮ ಸಾಮಾಜಿಕ ಬದುಕಿನ ಪರಿಕಲ್ಪನೆಗಳು. ಮಾನವೀಯ ಮೌಲ್ಯಗಳನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಅಭಿನಯಿಸಲ್ಪಡುತ್ತಿದ್ದವು. ಅಂತಹ ಕಲೆಗಳನ್ನು ಶಾಶ್ವತವಾಗಿ ಉಳಿಸುವ ಮಹತ್ವದ ಜವಾಬ್ದಾರಿ ನಮ್ಮ ಯುವಕರ ಮೇಲಿದೆ ಎಂದರು.
ರಂಗಕಲಾವಿದ ಚಂದ್ರಶೇಖರ್ ಮಾತನಾಡಿ, ಮರೆಯಾಗುತ್ತಿರುವ ನಮ್ಮ ರಂಗ ನಾಟಕಗಳಿಗೆ ಹೊಸ ಬೆಳಕು ಚೆಲ್ಲುವ ಹಾಗೂ ರಂಗ ಕಲಾವಿದರಿಗೆ ಪ್ರೋತ್ಸಾಹ ನೀಡುವ ಮಹದ್ದುದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಯಾದವ್ ಅಕಾಡೆಮಿಯ ಯಾದವ್ ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ಯುವಕರಿಗೆ ಉಚಿತವಾಗಿ ಆಂಗ್ಲ ಭಾಷೆ ಕಲಿಸುತ್ತಿದ್ದು ವಿದ್ಯಾವಂತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಪಪಂ ಸದಸ್ಯ ನರಸಿಂಹಮೂರ್ತಿ, ಯಾದವ್ ಅಕಾಡೆಮಿಯ ಯಾದವ್, ರಾಜೂ ಕ್ಷತ್ರಿಯ ಸಮಾಜದ ಉಪಾಧ್ಯಕ್ಷ ಶ್ರೀನಿವಾಸ್, ಕಲಾವಿದರಾದ ಕರಿಯಪ್ಪ, ಕಾಂತರಾಜು,ವೀರಭದ್ರಯ್ಯ, ಪ್ರಕಾಶ್, ತಾಕಸಾಪ ಅಧ್ಯಕ್ಷ ರಾಜೇಶ್ ಗುಬ್ಬಿ, ಜಗದೀಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

