ತುಮಕೂರು

ಆರೋಗ್ಯಕ್ಕೆ ಒತ್ತು ನೀಡಿ: ಮಹೇಶ್

Published On :

ಕೊರಟಗೆರೆ: ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ರೂಢಿಸಿಕೊಳ್ಳಲು ದೈಹಿಕ ಶಿಕ್ಷಣ ಅತಿ ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಐ.ಎಸ್. ಮಹೇಶ್ ತಿಳಿಸಿದರು.
ಅವರು ಪಟ್ಟಣದ ಸರ್ಕಾರಿ ಉರ್ದು ಶಾಲೆಯಲ್ಲಿ ಏರ್ಪಡಿಸಿದ್ದ ತಾಲೂಕು ಪ್ರಾಥಮಿಕ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕ ಒಂದು ದಿನದ ಸಿಸಿಎ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಶಾಲೆಗಳಲ್ಲಿ ಮಕ್ಕಳಿಗೆ ನಾಲ್ಕು ಗೋಡೆಗಳ ಮಧ್ಯ ನೀಡುವ ಪಠ್ಯ ಬೋಧನೆಯೊಂದಿಗೆ ಮೈದಾನದಲ್ಲಿ ಕಲಿಸುವ ದೈಹಿಕ ಶಿಕ್ಷಣದಿಂದ ಮಕ್ಕಳು ಉತ್ತಮ ಆರೋಗ್ಯವಂತರಾಗಿ ಬೆಳೆಯಲು ಸಾಧ್ಯ ಎಂದು ಅರಿತ ಸರ್ಕಾರ ಇತ್ತೀಚಿನ ದಿನಗಳಲ್ಲಿ ದೈಹಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ದೈಹಿಕ ಶಿಕ್ಷಕರು ಅದನ್ನು ಬಳಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶ್ರೀನಿವಾಸರೆಡ್ಡಿ ಮಾತನಾಡಿ, ಹಿಂದೆ ದೈಹಿಕ ಶಿಕ್ಷಣ ಶಿಕ್ಷಕರು ಕೇವಲ ಮೈದಾನದಲ್ಲಿ ಬೋಧಿಸುತ್ತಿದ್ದು ಇನ್ನು ಮುಂದೆ ಶಾಲಾ ಕೊಠಡಿ ಒಳಗೂ ಸಿಸಿಎ ನಿಯಮದ ಪ್ರಕಾರ ದೈಹಿಕ ಶಿಕ್ಷಣದ ಪಠ್ಯ ವಿಷಯವನ್ನು ಬೋಧಿಸುವ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು.
ತಾಲೂಕು ದೈಹಿಕ ಶಿಕ್ಷಣ ಪ್ರಭಾರ ಅಧೀಕ್ಷ ಕೃಷ್ಣಪ್ಪ ಮಾತನಾಡಿ, ದೈಹಿಕ ಶಿಕ್ಷಣ ಕಾರ್ಯಾಗಾರದಿಂದ ನೂತನ ಪಠ್ಯ ಕ್ರಮ ನಿರ್ವಹಿಸುವುದರೊಂದಿಗೆ ಕ್ರೀಡೆಗಳಲ್ಲಿ ನೂತನವಾಗಿ ಬದಲಾವಣೆಯಾಗಿರುವ ನಿಯಮಗಳನ್ನು ತಿಳಿದು ವಿದ್ಯಾರ್ಥಿಗಳಿಗೆ ತಿಳಿಸಲು ಸಹಕಾರಿಯಾಗಲಿದೆ ಎಂದರು.
ಮಧುಗಿರಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇಂಗ್ಲಿಷ್ ಕಂಠ ಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾದ 7ನೇ ತರಗತಿಯ ರುಮಾನಾ ಅಮ್ರೀನ್‌ಗೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪಪಂ ಅಧ್ಯಕ್ಷ ಅಶ್ವತ್ಥಪ್ಪ ಪ್ರಶಸ್ತಿ ಪತ್ರ ವಿತರಿಸಿದರು. ಮುಖಂಡ ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಗಂಗಮ್ಮ, ಸಿ.ಕೆ. ಗುಂಡೂರಾವ್, ನಾಗರಾಜು ಹಾಗೂ ತಾಲೂಕಿನ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.