ಪ್ರತಿಭೆ ಗುರ್ತಿಸುವಲ್ಲಿ ಪ್ರಾಮಾಣಿಕತೆಯಿರಲಿ
ಚಿಕ್ಕನಾಯಕನಹಳ್ಳಿ: ಹೆಚ್ಚುತ್ತಿರುವ ಶಿಕ್ಷಕರ ಪಠ್ಯೇತರ ಕಾರ್ಯಗಳ ಹೊರೆಯನ್ನು ಕಡಿಮೆ ಮಾಡುವಂತೆ ಸರ್ಕಾರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ರಾಜ್ಯ ಮಟ್ಟದ ಸಭೆಯಲ್ಲಿ ಮನವಿ ಮಾಡಲಾಗಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಸಾ.ಚಿ.ನಾಗೇಶ್ ಹೇಳಿದರು.
ಜ.17ರಂದು ಅವರು ಪಟ್ಟಣದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ 2013-14ನೇ ಸಾಲಿನ ಕಲಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಠ್ಯದ ಜೊತೆಯಲ್ಲಿ ಕಲಿಯುವ ಚಟುವಟಿಕೆಗಳು ಗುಣಾತ್ಮಕ ಶಿಕ್ಷಣ ನೀಡಲು ಸರ್ಕಾರದ ಪ್ರಯತ್ನವಾಗಿದೆ. ಮಕ್ಕಳ ಬೌದ್ಧಿಕ ಬೆಳವಣಿಗೆ ಉನ್ನತೀಕರಿಸಲು ಪ್ರತಿಭಾಕಾರಂಜಿಯಂತಹ ಅನೇಕ ಯೋಜನೆಗಳನ್ನು ಸರ್ಕಾರ ಹಮ್ಮಿಕೊಂಡಿದೆ. ಇಂದು ಎಲ್ಲರೂ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗುತ್ತಿರುವುದಕ್ಕೆ ಕಾರಣ ಹೆಚ್ಚುತ್ತಿರುವ ಶಿಕ್ಷಕರ ಅನ್ಯಕಾರ್ಯಗಳ ಜವಾಬ್ದಾರಿ.
ಸರ್ಕಾರದ ಪ್ರತಿಯೊಂದು ಕಾರ್ಯಕ್ರಮಗಳಿಗೂ ಶಿಕ್ಷಕರನ್ನೇ ನೇಮಕ ಮಾಡುವುದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಗಮನ ಹರಿಸುವ ಆಸಕ್ತಿ ಕುಂದುತ್ತದೆ. ಆದ್ದರಿಂದ ಶಿಕ್ಷಕರು ಶೈಕ್ಷಣಿಕ ಚಟುವಟಿಕೆಯಲ್ಲಿ ಹೆಚ್ಚುಹೆಚ್ಚು ತೊಡಗಿಸಿಕೊಳ್ಳಲು ಸಹಕಾರಿಯಾಗಲು ಅವರ ಅನ್ಯಕಾರ್ಯದ ಹೊರೆ ಕಡಿಮೆ ಮಾಡುವುದು ಅವಶ್ಯಕವಾಗಿದೆ ಎಂದು ಸಚಿವರಿಗೆ ಮನವರಿಕೆ ಮಾಡಲಾಗಿದೆ. ಈ ಬಗ್ಗೆ ಅವರು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಜಿಲ್ಲಾ ಪಂಚಾಯ್ತಿ ಸದಸ್ಯೆ ಲೋಹಿತಾ ಬಾಯಿ ಮಾತನಾಡಿ, ಶಿಕ್ಷಕರು ಮಕ್ಕಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಳೆರಡರಲ್ಲೂ ಸಮನಾಗಿ ತಯಾರು ಮಾಡಬೇಕು. ಬರೀ ಪುಸ್ತಕದ ಓದಿನಿಂದ ಸರ್ವತೋಮುಖ ಬೆಳವಣಿಗೆಯಾಗುವುದಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

