ತುಮಕೂರು

ಪೋಲಿಯೊ ಮುಕ್ತ ರಾಷ್ಟ್ರವಾಗಿ ಭಾರತ ಮುಂದುವರಿಯಲಿ

Published On :

ಕ.ಪ್ರ.ವಾರ್ತೆ   ಕೊರಟಗೆರೆ   ಜ.20
ಮಕ್ಕಳನ್ನು ಪೋಲಿಯೊ ರೋಗದಿಂದ ಮುಕ್ತಗೊಳಿಸಲು ಕಡ್ಡಾಯವಾಗಿ ಪೋಷಕರು ತಮ್ಮ ಮಕ್ಕಳಿಗೆ ಪೋಲಿಯೊ ಹನಿ ಹಾಕಿಸುವ ಮೂಲಕ ಪೋಲಿಯೊ ಮುಕ್ತ ಭಾರತವನ್ನು ಮುಂದುವರಿಸಬೇಕಾಗಿದೆ ಎಂದು  ತಾಲೂಕು ವೈದ್ಯಾಧಿಕಾರಿ ಮೋಹನ್ ದಾಸ್ ತಿಳಿಸಿದರು.
ಅವರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ 1995 ರಲ್ಲಿ ನಮ್ಮ ದೇಶದಲ್ಲಿ 35 ಸಾವಿರ ಜನರು ಪೋಲಿಯೊ ರೋಗದಿಂದ ನರಳುತ್ತಿದ್ದರು. ಆದರೆ ಸರ್ಕಾರದ ಮತ್ತು ಅಧಿಕಾರಿಗಳ ಶ್ರಮದಿಂದ ಇಂದು ಯಾವುದೇ ಪ್ರಕರಣಗಳು ಕಂಡು ಬಂದಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಪೋಲಿಯೊ ಮುಕ್ತ ಭಾರತವಾಗಿದ್ದು ಅದನ್ನು ಉಳಿಸಿಕೊಂಡು ಮತ್ತೆ ಪ್ರಕರಣ ಕಂಡು ಬರದಂತೆ ಮಾಡೋಣ ಎಂದರು.
ಆರೋಗ್ಯವಂತ ಮಗು ದೇಶದ ಆಸ್ತಿಯಾಗಿದ್ದು ಪೋಲಿಯೊ ಎಂಬ ಮಾರಕ ರೋಗ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಯನ್ನು ಉಂಟುಮಾಡುತ್ತದೆ.  5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ವರ್ಷಕ್ಕೆ ಎರಡು
ಬಾರಿಯಂತೆ 10 ಬಾರಿ ಕಡ್ಡಾಯವಾಗಿ ಪೋಲಿಯೊ ಹನಿ ಹಾಕಿಸಿ ಮಗುವಿನ ಆರೋಗ್ಯದ ಬಗ್ಗೆ ಶ್ರಮಿಸೋಣ ಎಂದು ತಿಳಿಸಿದ ಅವರು ಪಟ್ಟಣದ 1747 ಮಕ್ಕಳು ಸೇರಿದಂತೆ ತಾಲೂಕಿನಲ್ಲಿ 5 ವರ್ಷದೊಳಗಿನ 15304 ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಗುರಿ ಹೊಂದಿದ್ದು ಇದಕ್ಕಾಗಿ ತಾಲೂಕಿನಲ್ಲಿ 69 ಪೋಲಿಯೊ ಬೂತ್ ಗಳಲ್ಲಿ ಆರೋಗ್ಯ ಇಲಾಖೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಒಟ್ಟು 286 ಮಂದಿ ಸಿಬ್ಬಂದಿ 141 ತಂಡಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆಂದರು.
ಇದರೊಂದಿಗೆ ತಾಲೂಕಿನ ಪುಣ್ಯ ಕ್ಷೇತ್ರವಾದ ಗೊರವನಹಳ್ಳಿ ಲಕ್ಷ್ಮೀ ದೇವಾಲಯ, ಸಿದ್ದರಬೆಟ್ಟದ ಸಿದ್ದೇಶ್ವರ ದೇವಾಲಯ ಮತ್ತು ಬಸ್ ನಿಲ್ದಾಣಗಳಲ್ಲಿ ವಿಶೇಷ ಬೂತ್ಗಳನ್ನು ತೆರೆಯಲಾಗಿದೆ. ಪೋಷಕರು ಕಡ್ಡಾಯವಾಗಿ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕೆಂದು ತಿಳಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.